ಕಲ್ಯಾಣಸಿರಿ ವಿಶೇಷ

ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ:

ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ:

Dr. Sharanabasappa Kolkara to be conferred with Samshodhana Shri Award


ಗಂಗಾವತಿ:ಡಾ. ಶರಣಬಸಪ್ಪ ಕೋಲ್ಕಾರ ಗೆ  ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ: ಕರ್ನಾಟಕ ಇತಿಹಾಸ ಅಕಾಡೆಮಿಯ 39ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಗದುಗಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಈಚೆಗೆ ಜರಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಹಿರಿಯ ಇತಿಹಾಸ ಸಂಶೋಧಕರು ಮತ್ತು ಕಲ್ಮಠ ಚನ್ನಬಸವಸ್ವಾಮಿ ಮಹಿಳಾ ಕಾಲೇಜಿನ ಪ್ರಾಚಾರ್ಯ  ಡಾ.ಶರಣಬಸಪ್ಪ ಕೋಲ್ಕಾರ್ ಅವರಿಗೆ 2025ರ ಸಾಲಿನ ಸಂಶೋಧನಾ ಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಸನ್ಮಾನ ಪತ್ರ ಮತ್ತು 25000 ನಗದು ಹಣವನ್ನು ಹೊಂದಿದೆ.

ಈ ಸಂದರ್ಭದಲ್ಲಿ ಸಚಿವರಾದ ಹೆಚ್. ಕೆ .ಪಾಟೀಲ್ ಹಿರಿಯ ಇತಿಹಾಸ ತಜ್ಞರಾದ ಡಾ. ಲಕ್ಷ್ಮಣ್ ತೆಲಗಾವಿ ,ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ್ ವಿ ನಾಡಗೌಡರ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶರಣು ಗೋಗೇರಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ರಾಜಾರಾಮ್ ಹೆಗಡೆ ,ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಡಾ .ದೇವರ ಕೊಂಡಾರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಎಲ್ ರಾಜಶೇಖರ್ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತ ಕೋಲ್ಕಾರ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕೊಟ್ಟೂರು ಮಹಾಸ್ವಾಮಿಗಳು, ಉಪಾಧ್ಯಕ್ಷರಾದ ಕೆ ಚನ್ನಬಸಯ್ಯ ಸ್ವಾಮಿ, ಕಾರ್ಯದರ್ಶಿ ಶರಣೇಗೌಡ ಜಿ ಮಾಲಿಪಾಟೀಲ್ ,ಹಿರಿಯ ನಿರ್ದೇಶಕರಾದ ಮಾಜಿ ಸಂಸದ ಎಸ್. ಶಿವರಾಮಗೌಡ ,  ಮಾಜಿ ಶಾಸಕ ಪರಣ್ಣ ಮುನವಳ್ಳಿ, ಎಚ್ ಎಂ ಮಂಜುನಾಥ್, ಸುರೇಶ ಸಿಂಗನಾಳ, ಕಳಕನಗೌಡ ಪಾಟೀಲ್, ರಾಚಯ್ಯ ಸ್ವಾಮಿ ಹುಚ್ಚೇಶ್ವರ ಮಠ ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago