ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ.. ರವಿ ಚೌಹಾನ್.
Protecting children's rights is everyone's responsibility.. Ravi Chauhan. ಗಂಗಾವತಿ. ಭಾರತದ ಸಂವಿಧಾನದಲ್ಲಿ ಮಕ್ಕಳಿಗೆ ವಿಶೇಷ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಲಾಗಿದ್ದು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿದೆ ಎಂದು ಎಚ್ ಆರ್ ಸರೋಜಮ್ಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವಿ ಚೌಹಾನ್ ಹೇಳಿದರು. ಅವರು ಎಚ್ ಆರ್ ಸರೋಜಮ್ಮ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾದ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಕ್ಕಳ ಮಾರಾಟ. ಸೇರಿದಂತೆ ದೇವದಾಸಿ ಪದ್ಧತಿ ಆಚರಣೆ ಹೀಗೆ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂದು ತಿಳಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯು ಎಂ ಬಸವರಾಜ್ ಮಾತನಾಡಿ ಮಕ್ಕಳಿಗೆ ಮನೆಯಲ್ಲಿ ಪೋಷಕರು ಶಾಲೆಯಲ್ಲಿ ಶಿಕ್ಷಕರು ಶಿಕ್ಷಣದ ಜೊತೆಗೆ ಗುಣಮಟ್ಟದ ಸಂಸ್ಕಾರ ಜೀವನದ ಮೌಲ್ಯಗಳನ್ನು ತಿಳಿ ಹೇಳುವ ಕಾರ್ಯವಾಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ವಿವೇಕ ಭಾರತಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಂಗಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಗೆ ವಿಶೇಷ ಆಯೋಜಿಸುವುದರ ಮೂಲಕ ಅನ್ನದಾಸೋಹ ನಡೆಸಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…