ವೃತ್ತಿಪರ ಹಾಸ್ಟೆಲ್ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ
SFI protests demanding release of selection list of vocational hostel students ಗಂಗಾವತಿ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿ ಹಲವು ತಿಂಗಳುಗಳು ಗತಿಸಿದರು ಸಹ ಇದುವರೆಗೆ ಹಾಸ್ಟೆಲ್ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸದೆ ನಿರ್ಲಕ್ಷ ವಹಿಸುತ್ತಿರುವುದನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಬ್ರೇಶನ್ ತಾಲೂಕ ಸಮಿತಿಯ ಕಾರ್ಯಕರ್ತರು ಶನಿವಾರದಂದು ವಿದ್ಯಾರ್ಥಿ ಗಳೊಂದಿಗೆ ತಾಲೂಕಾ ಪಂಚಾಯತ್ ಕಾರ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ನಾಗರಾಜ್ ಮಾತನಾಡಿ ಗಂಗಾವತಿ ಸುತ್ತಮುತ್ತಲಿನ ಗ್ರಾಮಗಳಿಂದ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ವ್ಯಾಸಂಗ ಮಾಡಲು ಆಗಮಿಸುತ್ತಿದ್ದು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪಾಠ ಪ್ರವಚನಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ. ಪ ಜಾತಿ ಪ ಪಂಗಡ. ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಬಿಡುಗಡೆಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ತಕ್ಷಣವೇ ಆಯ್ಕೆಪಟ್ಟಿ ಬಿಡುಗಡೆಗೊಳಿಸಿ ವೃತ್ತಿಪರ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಒತಾಯಿಸಿದರು. ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ್ ಮಾತನಾಡಿ ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ ಧೋರಣೆಯಿಂದಾಗಿ ವಸತಿ ನಿಲಯಕ್ಕಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಬಾರದೊಳಗೆ ಪ್ರಕಟಸ ದೆ ಇದ್ದಲ್ಲಿ ವಿದ್ಯಾರ್ಥಿಗಳೊಂದಿಗೆ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಸಹ ಕಾರ್ಯದರ್ಶಿ ಬಸಯ್ಯ ಸದಸ್ಯರುಗಳಾದ ಶರಣಬಸವ ದೊಡ್ಡ ಬಸವಸದಸ್ಯರುಗಳಾದ ಶರಣಬಸವ ದೊಡ್ಡ ಬಸವ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಬಳಿಕ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…