ಬೆಂಗಳೂರು: ಐಸಿಎಫ್ಎಐ ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್ ತನ್ನ ಬೆಂಗಳೂರು ಕ್ಯಾಂಪಸ್ನಲ್ಲಿ ಐಸಿಎಫ್ಎಐ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ನೇಪಾಳ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಪ್ರತಿನಿಧಿ ಮಂಡಳಿ ಭಾಗವಹಿಸಿತ್ತು.
ನೇಪಾಳ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ವಿಶೇಷ ಏಕದಿನ ತರಬೇತಿ ಕಾರ್ಯಕ್ರಮದಲ್ಲಿ ನೇಪಾಳದ ಗಣ್ಯ ನಿರ್ವಹಣಾ ವೃತ್ತಿಪರರ ಪ್ರತಿನಿಧಿ ಮಂಡಳಿಯು ಸಕ್ರಿಯವಾಗಿ ಪಾಲ್ಗೊಂಡಿತು.
ನೆಟ್ವರ್ಕಿಂಗ್ ಮತ್ತು ಸಾಮಾಜಿಕ ಸಂಪರ್ಕ, ಬುದ್ಧಿಮತ್ತೆ ಮತ್ತು ಬದಲಾವಣೆ ನಿರ್ವಹಣೆ, ಸಂವಹನ ಹಾಗೂ ತಂತ್ರಜ್ಞಾನ ಮತ್ತು ಡಿಜಿಟಲ್ ಸಾಕ್ಷರತೆ: ಸಂಪರ್ಕ ಮತ್ತು ಅನ್ವೇಷಣೆಗೆ ಸಾಧನಗಳ ಕುರಿತು ವ್ಯಾಪಕವಾಗಿ ಚರ್ಚಿಸಲಾಯಿತು.
ಡೀನ್ ಡಾ. ವಿನಯ್ ಜೋಶಿ ಮಾತನಾಡಿ, ನೇಪಾಳದ ಎಲ್ಲ ಪ್ರತಿನಿಧಿಗಳನ್ನು ಕೊಡುಗೆಯನ್ನು ಸ್ಮರಿಸಿದರು. ಹಿಮಾಲಯ ರಾಜ್ಯದೊಂದಿಗೆ ಇರುವ ದೀರ್ಘಕಾಲದ ಸಂಬಂಧವನ್ನು ಪ್ರಸ್ತಾಪಿಸಿದರು. ಐಸಿಎಫ್ಎಐ ಗುಂಪು ಉನ್ನತ ಶಿಕ್ಷಣ ಮತ್ತು ವೃತ್ತಿಪರ ಅಭಿವೃದ್ಧಿ ಕ್ಷೇತ್ರಗಳಲ್ಲಿ ನೀಡುತ್ತಿರುವ ವ್ಯಾಪಕ ಸೇವೆಗಳು ಮತ್ತು ಪರಿಣಾಮಕಾರಿ ಕೊಡುಗೆಗಳ ಕುರಿತು ವಿವರಿಸಿದರು.
ಪ್ರೋ ವೈಸ್ ಚಾನ್ಸಲರ್ ಡಾ. ಮುದ್ದು ವಿನಯ್ ಅವರು “ಲೈಫ್ ಚಕ್ರ” ಕುರಿತು ಸಂಕ್ಷಿಪ್ತ ಪರಿಚಯ ನೀಡಿ, ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲು ಸದಾ ಸಂತೋಷವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…