ಶಾಸಕರ ಖರೀದಿ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು

ಶಾಸಕರ ಖರೀದಿ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು

Allegations of MLAs being bribed: Complaint filed against fraudster Narayanaswamy

ಬೆಂಗಳೂರು,ನ.25: ಕಾಂಗ್ರೆಸ್ ಶಾಸಕರ ಖರೀದಿ ನಡೆಯುತ್ತಿದೆ ಎಂದು ಆಧಾರ ರಹಿತ ಹೇಳಿಕೆ ನೀಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸೋಮವಾರ(.24) ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಶಾಸಕರಿಗೆ ತಲಾ 50 ಕೋಟಿ ರೂ. ನಗದು, ಒಂದು ಫ್ಲಾಟ್ ಹಾಗೂ ಫಾರ್ಚೂನರ್ ಕಾರು ಕೊಡಲಾಗುತ್ತಿದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ ಮಾತ್ರವಲ್ಲದೆ, ಆಧಾರರಹಿತವಾಗಿದೆ ಎಂದು ಜುನೈದ್ ಪಿ.ಕೆ. ಹೇಳಿದ್ದಾರೆ.

ಒಂದು ವೇಳೆ ರೀತಿಯ ಘಟನೆ ನಡೆದರೆ ಇದು ಭ್ರಷ್ಟಾಚಾರದ ಒಂದು ಭಾಗವಾಗಿದೆ. ಬಗ್ಗೆ ಪ್ರಚಾರ ಗಿಟ್ಟಿಸಲು ಕಾಂಗ್ರೆಸ್ ಶಾಸಕರ ಕುರಿತು ಇಲ್ಲಸಲ್ಲದ ಆರೋಪ ಮಾಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಅವರು ಒತ್ತಾಯಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago