Draft voters' list published: Objections invited
ಕೊಪ್ಪಳ ನವೆಂಬರ್ 25 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗೆ ಅನುಗುಣವಾಗಿ ಮಂಗಳವಾರ ದಂದು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚೂರಪಡಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಈ ಕರಡು ಮತದಾರರ ಪಟ್ಟಿಯ ಭೌತಿಕ ಪ್ರತಿಯು ಸಂಬಂಧಪಟ್ಟ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ (ಜಿಲ್ಲಾಧಿಕಾರಿಗಳ) ಕಛೇರಿಯಲ್ಲಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತಹಸೀಲ್ದಾರ ಕಛೇರಿಯಲ್ಲಿ ಲಭ್ಯವಿದ್ದು, ಮತದಾರರು ಪರಿಶೀಲಿಸಬಹುದಾಗಿದೆ. ಇದನ್ನು ಹೊರತು ಪಡಿಸಿಯು ಸಹ ಸರ್ಕಾರದ ಅಧಿಕೃತ ಅಂರ್ತಜಾಲದಲ್ಲಿಯೂ ಮಾಹಿತಿ ಲಭ್ಯವಿದ್ದು, ಇದನ್ನು ಮತದಾರರು ಅವಲೋಕಿಸಿ ಕೊಳ್ಳಬಹುದಾಗಿದೆ.
ಹೀಗೆ ಪ್ರಚೂರಪಡಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಮತದಾರರು ಆಕ್ಷೇಪಣೆಯನ್ನು ಲಿಖಿತವಾಗಿ, ಡಿಸೆಂಬರ್ 10 ರೊಳಗಾಗಿ ಸಂಬಂಧಿಸಿದ ಆಯಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಇದನ್ನು ಹೊರತುಪಡಿಸಿಯು ಸಹ ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka