ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವು
Three people including senior IAS officer Mahantesh Bilagi died in a road accident

ಕಲಬುರಗಿ, ನ 25.ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು.
ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.
ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.
ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವು
ಕಲಬುರಗಿ ನ 25.ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು.
ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.
ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.
Kalyanasiri Kannada News Live 24×7 | News Karnataka