ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ: ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ: ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

Hanumanmala immersion program: District Magistrate orders ban on sale of liquor
ಕೊಪ್ಪಳ ನವೆಂಬರ್ 26, (ಕರ್ನಾಟಕ ವಾರ್ತೆ): ಗಂಗಾವತಿ ನಗರದಲ್ಲಿ ಡಿಸೆಂಬರ್ 3 ರಂದು ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ನಿಮಿತ್ತ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 2 ರ ಸಂಜೆ 6 ಗಂಟೆಯಿAದ ಡಿಸೆಂಬರ್ 3 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಗಂಗಾವತಿ ನಗರದಲ್ಲಿ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಿಮಿತ್ತ ಪವಮಾನ ಹೋಮ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆ, ನೆರೆ ರಾಜ್ಯಗಳಾದ ಮಹಾರಾಷ್ಟç, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಾವಿರಾರು ಜನ ಭಕ್ತರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ.
ಆದೇಶದನ್ವಯ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಬೇಕು. ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago