Breaking News

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಜಾಹೀರಾತು
Diploma in Co-operative Management Training: Application Invitation for Admission
ಕೊಪ್ಪಳ ಡಿಸೆಂಬರ್ 02, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿAದ ಕಾರ್ಯನಿರ್ವಹಿಸುವ ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅಥವಾ 180 ದಿನಗಳ ಅವಧಿಯ ‘ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’ ತರಬೇತಿ ನೀಡಲಾಗುತ್ತಿದ್ದು, 2026ರ ಜನವರಿಯಿಂದ ತರಬೇತಿ ಪ್ರಾರಂಭವಾಗಲಿವೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ.
ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ.
ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು.
ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು.
ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ ರಸ್ತೆ, ಕಲಬುರಗಿ-585105 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.08472-245340, ಮೊ.9916726886, 9742307153, 9113916753 ಗೆ ಸಂಪರ್ಕಿಸಬಹುದು ಎಂದು ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 12 02 17 10 25 65 6012fa4d4ddec268fc5c7112cbb265e7.jpg

ಸೋಮನಹಳ್ಳಿ ಎ.ಪಿ.ಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಕಲೆಯ ವಸ್ತುಪ್ರದರ್ಶನ

ಸೋಮನಹಳ್ಳಿ ಎ.ಪಿ.ಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಕಲೆಯ ವಸ್ತುಪ್ರದರ್ಶನ Science and Art Exhibition at Somanahalli APS …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.