ಕೊಪ್ಪಳ ಅಂಚೆ ವಿಭಾಗ: ಡಿ.12 ರಂದು ಪಿಂಚಣಿ ಅದಾಲತ್

ಕೊಪ್ಪಳ ಅಂಚೆ ವಿಭಾಗ: ಡಿ.12 ರಂದು ಪಿಂಚಣಿ ಅದಾಲತ್
Koppal Post Office: Pension Adalat on December 12th

ಕೊಪ್ಪಳ ಡಿಸೆಂಬರ್ 06 (ಕರ್ನಾಟಕ ವಾರ್ತೆ): ಕೊಪ್ಪಳ ವಿಭಾಗೀಯ ಅಂಚೆ ಕಚೇರಿ ವತಿಯಿಂದ ಅಂಚೆ ಇಲಾಖೆ ಮೂಲಕ ಪಿಂಚಣಿ ಪಡೆಯುವ ಪಿಂಚಣಿದಾರರ ಅಹವಾಲು, ದೂರು ಸ್ವೀಕಾರಕ್ಕಾಗಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಡಿಸೆಂಬರ್ 12 ರಂದು ಸಂಜೆ 4 ಗಂಟೆಗೆ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸೇವೆಯಿಂದ ನಿವೃತ್ತರಾದ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳ ಹಾಗೂ ಕುಟುಂಬ ಪಿಂಚಣಿದಾರರ ಅಹವಾಲುಗಳು ಇದ್ದಲ್ಲಿ ಅವುಗಳನ್ನು ಅದಾಲತ್ ನಲ್ಲಿ ಆಲಿಸಲಾಗುವುದು. ನಿವೃತ್ತಿ ಹೊಂದಿದ ಗ್ರಾಮೀಣ ಅಂಚೆ ಸೇವಕರು ಮತ್ತಿತರರಿಗೆ ಈ ಅದಾಲತ್ ನಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ.
ಅಂಚೆ ಮೂಲಕ ಪಿಂಚಣಿ ಪಡೆಯುವ ಪಿಂಚಣಿದಾರರು, ಅವಲಂಬಿತರು ಪಿಂಚಣಿ ಅದಾಲತ್‌ನಲ್ಲಿ ಚರ್ಚಿಸುವ ಯಾವುದೇ ತರಹದ ಭತ್ಯೆ ಅಹವಾಲುಗಳಿದ್ದಲ್ಲಿ ಅವುಗಳನ್ನು ಅಂಚೆ ಅಧೀಕ್ಷಕರ ಕಚೇರಿ, ಕೊಪ್ಪಳ ವಿಭಾಗ, ಎಲ್‌ಐಸಿ ಆಫೀಸ್ ಎದುರುಗಡೆ, ಕೊಪ್ಪಳ-583231 ವಿಳಾಸಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ: dokoppal.ka@indiapost.gov.in ಗೆ ಡಿಸೆಂಬರ್ 11 ರೊಳಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಕೊಪ್ಪಳ ವಿಭಾಗೀಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago