Breaking News

ರಕ್ತದಾನಿನಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ – ಡಾ. ಸುರೇಶ ಹಿಟ್ನಾಳ

The short URL of the present article is: https://kalyanasiri.in/2psu

ರಕ್ತದಾನಿನಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ – ಡಾ. ಸುರೇಶ ಹಿಟ್ನಾಳ

There is a need to increase the number of blood donors – Dr. Suresh Hitnal

Screenshot 2025 12 06 18 21 40 10 E307a3f9df9f380ebaf106e1dc980bb62188932700807768488
ಕೊಪ್ಪಳ : ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದ್ದು, ಅದಕ್ಕೆ ಅನುಗುಣವಾಗಿ ರಕ್ತದಾನಿಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ಲಡ್ ಬ್ಯಾಂಕ್ ನಿಂದಾಗಿ ಬಹಳ ಜನರಿಗೆ ಅನುಕೂಲವಾಗುತ್ತಿದೆ. ನಿರೀಕ್ಷೆ ಮೀರಿ ಶ್ರಮಿಸಿ, ರಕ್ತವನ್ನು ಸಂಗ್ರಹಿಸಲಾಗುತ್ತದೆ. ಆದರೆ, ಈ ಸಮಸ್ಯೆಯನ್ನು ನಿಗಿಸಲು ನಾವು ರಕ್ತದಾನಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕಾಗಿದೆ. ಇದಕ್ಕಾಗಿ ರೂಪಿತ ಮನೆಗೊಬ್ಬ ರಕ್ತದಾನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ದಿಸೆಯಲ್ಲಿ ಪ್ರಯತ್ನ ಮಾಡೋಣ ಎಂದರು.

ಜನಸಂಖ್ಯೆಯ ಶೇಕಡಾ 1 ರಷ್ಟು ಜನರು ರಕ್ತದಾನ ಮಾಡಿದರೇ ಸಾಕಾಗಾತ್ತದೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 001 ರಷ್ಟು ರಕ್ತದಾನಿಗಳು ಇಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದಲ್ಲದೆಯೂ ರೆಡ್ ಕ್ರಾಸ್ ಸಂಸ್ಥೆ ಸಾಕಷ್ಟು ಮಾನವೀಯ ಕಲ್ಯಾಣದ ಕಾರ್ಯಗಳನ್ನು ಮಾಡುತ್ತಿದೆ. ಯುತ್ ರೆಡ್ ಕ್ರಾಸ್, ಜೂನಿಯರ್ ರೆಡ್ ಕ್ರಾಸ್ ನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ ಎಂದರು.

ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಉಪಾಧ್ಯಕ್ಷ ವರ್ಣೀತ್ ನೇಗಿ ಅವರು ಮಾತನಾಡಿ, ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದು ಇನ್ನು ಹೆಚ್ಚು ಹೆಚ್ಚು ಆಗಬೇಕಾಗಿದೆ ಎಂದರು. ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ಗ್ರಾಮ ಸ್ಥಳೀಯ ಸಂಸ್ಥೆಗಳಿಂದ ದೊರೆಯುವ ನೆರವು ಕುರಿತು ಈಗಾಗಲೇ ಅಗತ್ಯ ಕ್ರಮವಹಿಸಲಾಗಿದ್ದು, ಈಗಗಾಲೇ ಕೆಲವೊಬ್ಬರು ನೀಡುತ್ತಿದ್ದಾರೆ ಎಂದರು.

ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಶರದ್ ರೋಡಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೊಪ್ಪಳ ರೆಡ್ ಕ್ರಾಸ್ ಸಂಸ್ಥೆ ಇತರ ಜಿಲ್ಲೆಗಳಿಂದ ಹತ್ತು ಹೆಜ್ಜೆ ಮುಂದೆ ಇದೆ ಎಂದು ಅಂದುಕೊಂಡಿದ್ದೇವು, ಆದರೂ ಅದು ಇಲ್ಲಿಗೆ ಬಂದ ಮೇಲೆ ಗೊತ್ತಾಯಿತು ನೂರು ಹೆಜ್ಜೆ ಮುಂದೆ ಎಂದು ಅಭಿಪ್ರಾಯಪಟ್ಟರು.

ಎಲ್ಲರೂ ಯುವ ಉತ್ಸಾಹಿಗಳಾಗಿದ್ದಾರೆ. ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಕೊಪ್ಪಳದಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳೆಯುತ್ತಿರುವುದನ್ನು ನೋಡಿದರೇ ಅದು ಅಕ್ಕಪಕ್ಕದ ಜಿಲ್ಲೆಗಳನ್ನು ಬೆಳೆಸುವಷ್ಟು ಶಕ್ತಿಯುತವಾಗಿದೆ ಎಂದು ಎಂದು ಹೇಳಿದರು.

ಅನೇಕ ಜಿಲ್ಲೆಗಳಲ್ಲಿ ಇನ್ನು ಅಂಬೆಗಾಲು ಇಡುತ್ತಿರುವ ರೆಡ್ ಕ್ರಾಸ್ ಸಂಸ್ಥೆಗಳು ಕೊಪ್ಪಳವನ್ನು ಮಾದರಿಯಾಗಿಟ್ಟುಕೊಂಡು ಅಭಿವೃದ್ಧಿ ಮಾಡಬೇಕು ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಪ್ರಧಾನಕಾರ್ಯದರ್ಶಿ ಮತ್ತು ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ ಅವರು ವಾರ್ಷಿಕ ವರದಿಯನ್ನು ವಾಚನ ಮಾಡಿದರು. ಗೌರವ ಕೋಶಾಧ್ಯಕ್ಷ ಸುಧೀರ ಅವರಾದಿ ಅವರು ಲೆಕ್ಕಪತ್ರ ವಾಚನ ಮಾಡಿದರು. ಕೊಪ್ಪಳ ಜಿಲ್ಲಾ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ ಅವರು ಪ್ರಸ್ಥಾವಿಕವಾಗಿ ಮಾತನಾಡಿ, ರೆಡ್ ಕ್ರಾಸ್ ಕೊಪ್ಪಳ ಶಾಖೆಯ ಸಾಧನೆಗಳು ಹಾಗೂ ಕನಸುಗಳ ಕುರಿತು ವಿವರಿಸಿದರು.

ಮಹಾಪೋಷಕರಾದ ಶ್ರೀನಿವಾಸ ಗುಪ್ತಾ, ಬಸವರಾಜ ಪುರದ, ಬಿ.ಎಸ್. ಪಾಟೀಲ್, ಆರ್.ಬಿ. ಪಾನಘಂಟಿ, ಎಸ್. ಆರ್. ಪಾಟೀಲ್, ಸುರೇಶ ಭೂಮರಡ್ಡಿ, ಕೃಷ್ಣಾ ಉಕ್ಕುಂದ, ಕೃಷ್ಣಮೂರ್ತಿ, ರಾಘವೇಂದ್ರ ಪೋತೆದಾರ, ರಾಮಣ್ಣ ಹಳ್ಳಿಗುಡಿ ಅವರನ್ನು ಹಾಗೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿದ ಸಂಘ, ಸಂಸ್ಥೆಗಳು, ಕಾಲೇಜುಗಳು, ಗ್ರಾಮ ಪಚಾಯಿತಿಗಳ ಪ್ರತಿನಿಧಿಗನ್ನು ಮತ್ತು ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.

ಉಪಸಭಾಪತಿಗಳಾದ ಡಾ. ಸಿ.ಎಸ್. ಕರಮುಡಿ, ಮಂಜುನಾಥ ಸಜ್ಜನ, ಡಾ. ಗವಿ ಪಾಟೀಲ್, ಡಾ. ಶಿವನಗೌಡ ದಾನರಡ್ಡಿ ಇದ್ದರು. ಶ್ರೀಮತಿ ಮಲ್ಲಿಕಾ ಪ್ರಾರ್ಥನಾ ಗೀತೆ ಹಾಡಿದರು. ರಮೇಶ ತುಪ್ಪದ ಸ್ವಾಗತಿಸಿದರೇ ರಾಜೇಶ ಯಾವಗಲ್ ಮತ್ತು ಡಾ. ಶಿವನಗೌಡ ಅವರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಡಾ. ರವಿ ದಾನಿ ಅವರು ವಂದನಾರ್ಪಣೆ ಮಾಡಿದರು.

6ಕೆಪಿಎಲ್21 ಕೊಪ್ಪಳ ನಗರದ ಜೆ.ಎಚ್. ಪಾಟೀಲ್ ಸಭಾಂಗಣದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ 2024-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯಲ್ಲಿ ಮಹಾಪೋಷಕರನ್ನು ಸನ್ಮಾನಿಸಲಾಯಿತು.

The short URL of the present article is: https://kalyanasiri.in/2psu

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.