ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಗೊಳಿಸಿಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಡಾ.ವೆಂಕಟೇಶ ಬಾಬು ಸೂಚನೆ
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
Guarantee Scheme Progress Review Meeting
ಗಂಗಾವತಿ : ಪಂಚಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಡಾ.ವೆಂಕಟೇಶ ಬಾಬು ಅವರು ಹೇಳಿದರು.
ನಗರದ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಅನ್ನಭಾಗ್ಯ ಯೋಜನೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಪ್ರತಿ ತಿಂಗಳು ಪಡಿತರ ವಿತರಣೆಯಾಗಬೇಕು. ತಿಂಗಳ ಕೊನೆ ದಿನದವರೆಗೆ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಣೆ ಮಾಡಬೇಕು ಎಂದು ಆಹಾರ ನಿರೀಕ್ಷಕರಿಗೆ ಸೂಚನೆ ನೀಡಿದರು.
ತಾಲೂಕಿನಲ್ಲಿ ಶಾಲಾ -ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಬಸ್ಸಿನ ಸೌಲಭ್ಯ ಕಲ್ಪಿಸಬೇಕು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯಿಂದ ಯಾವುದೇ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಮರಣ ಹೊಂದಿದ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಬೇಕು ಎಂದು ಸೂಚಿಸಿದರು.
ತಾಪಂ ಇಓ ರಾಮರೆಡ್ಡಿ ಪಾಟೀಲ್ ಅವರು ಮಾತನಾಡಿ, ಅನುಷ್ಠಾನ ಇಲಾಖೆ ಅಧಿಕಾರಿಗಳು ಶೆ.100 ರಷ್ಟು ಪ್ರಗತಿ ಸಾಧಿಸಬೇಕು. ಯೋಜನೆಯಿಂದ ಹೊರಗಿರುವ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆ ಅಧಿಕಾರಿಗಳು ಸಭೆಗೆ ಪ್ರಗತಿ ವರದಿ ಒಪ್ಪಿಸಿದರು.
ಸಿಡಿಪಿಓ ಜಯಶ್ರೀ, ಕೆಇಬಿ ಎಇಇ ಮಂಜುನಾಥ, ಕೆಎಸ್ ಆರ್ ಟಿಸಿ ತಾಲೂಕು ವ್ಯವಸ್ಥಾಪಕರಾದ ರಾಜಶೇಖರ, ಉದ್ಯೋಗ ಇಲಾಖೆ ಅಧಿಕಾರಿಗಳಾದ ಹನುಮೇಶ, ಆಹಾರ ನಿರೀಕ್ಷಕರಾದ ನಾಗರತ್ನ, ವಿಷಯ ನಿರ್ವಾಹಕರಾದ ರವೀಂದ್ರ ಕುಲಕರ್ಣಿ, ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಸದಸ್ಯರಾದ ಓಂಕಾರಪ್ಪ, ಪ್ರಜ್ವಲ್, ಮುಸ್ತಾಕ್, ಮಂಜುನಾಥ ಕಲಾಲ್, ಹಮೀದ್ ಮುಲ್ಲಾ, ಅಹ್ಮದ್ ಪಟೇಲ್, ಬಿ. ರಾಜಪ್ಪ ಸೇರಿ ಇತರರು ಇದ್ದರು.
Kalyanasiri Kannada News Live 24×7 | News Karnataka