Breaking News

ಡಿ. 10 ರಂದು ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

The short URL of the present article is: https://kalyanasiri.in/h4sz
ಡಿ. 10 ರಂದು ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
Progress review meeting of SCP, TSP projects on December 10

ಕೊಪ್ಪಳ ಡಿಸೆಂಬರ್ 08 (ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ -2025 ರ ಪ್ರಗತಿ ಪರಿಶೀಲನಾ (ಜಿಲ್ಲಾ ಮೇಲ್ವಿಚಾರಣ ಸಮಿತಿ) ಸಭೆಯನ್ನು ಡಿಸೆಂಬರ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಬAಧಿಸಿದ ಎಲ್ಲಾ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು 2025ರ ಅಕ್ಟೋಬರ್ ಅಂತ್ಯದವರೆಗಿನ ಸಂಪೂರ್ಣ ಪ್ರಗತಿ ವರದಿಯೊಂದಿಗೆ ಈ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆ ಅಧಿನಿಯಮ 2013ರ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The short URL of the present article is: https://kalyanasiri.in/h4sz

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.