ಡಿ. 12ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
Walk-in interview in Koppal on December 12thಕೊಪ್ಪಳ ಡಿಸೆಂಬರ್ 09 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಡಿಸೆಂಬರ್ 12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಇತರೆ ಪದವಿ ಮುಗಿಸಿದ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಬಿ.ಇ-ಎಲೆಕ್ಟ್ರಿಕಲ್, ಬಿ.ಇ-ಮೆಕ್ಯಾನಿಕಲ್, ಬಿ.ಇ-ಇ&ಸಿ, ಎಂ.ಎಸಿ-ಮೆತ್‌ಮೆಟಿಕ್ಸ್ ಮುಗಿಸಿದ ಅಭ್ಯರ್ಥಿಗಳು ಭೋಧನಾ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು, 18 ರಿಂದ 32 ವರ್ಷ ನಿರುದ್ಯೋಗಿ ಪುರಷರು ಮತ್ತು ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kalyanasiri Kannada News Live 24×7 | News Karnataka