ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
Protection of human rights is the responsibility of all of us: District Collector Dr. Suresh Itnal

ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ನಮ್ಮ ಮತ್ತು ನಿಮ್ಮ ಮೇಲೆ ಹೆಚ್ಚಿನ ರೀತಿಯ ಜವಾಬ್ದಾರಿಗಳು ಇವೆ. ಅದನ್ನು ಎಲ್ಲರೂ ಅರಿತು ಕೊಂಡು ಇನ್ನೂ ಹೆಚ್ಚಿನ ರಿತಿಯ ಕ್ರಮ ಕೈಗೊಳ್ಳುವುದರ ಜತೆಗೆ ಎಲ್ಲರೂ ಒಟ್ಟಾಗಿ ಮಾನವ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಹೇಳಿದರು.
ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಇವರುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ನಮ್ಮ ದೇಶದಲ್ಲಿ ಸಂವಿಧಾನಾತ್ಮಕ ಹಕ್ಕು, ಶಾಸನಬದ್ಧ ಹಕ್ಕು ಹಾಗೂ ಖಾಸಗಿ ಹಕ್ಕು ಎನ್ನುವ ಮೂರು ಬಗೆಯ ಹಕ್ಕುಗಳಿವೆ. ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ವಿರುದ್ಧದ ಹಕ್ಕು, ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು, ಕಲಿಕೆಯ ಹಕ್ಕು, ಭಾರತದ ಯಾವುದೇ ಸ್ಥಳಕ್ಕೆ ಹೋಗಲು ಮತ್ತು ಅಲ್ಲಿ ವಾಸಿಸುವ ಹಕ್ಕು, ಧಾರ್ಮಿಕ ಸಾತಂತ್ರ್ಯದ ಹಕ್ಕು, ಸಮಾನತೆಯ ಮತ್ತು ಸಂವಿಧಾನಾತ್ಮಕ ಪರಿಹಾರದ ಹಕ್ಕು ಸೇರಿ ಹಲವಾರು ಹಕ್ಕುಗಳು ನಮಗೆ ಸಂವಿಧಾನಬದ್ಧವಾಗಿ ಬಂದಿವೆ. ಹುಟ್ಟಿನಿಂದಲೇ ಎಲ್ಲರೂ ಮಾನವ ಹಕ್ಕುಗಳನ್ನು ಪಡೆದಿರುತ್ತಾರೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಕ್ಕುಗಳು ಎಷ್ಟು ಮುಖ್ಯವೋ ಅಷ್ಟೇ ಕರ್ತವ್ಯಗಳು ಕೂಡ ಬಹಳ ಮುಖ್ಯ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.
ಈ ದಿನಾಚರಣೆಯಂದಷ್ಟೇ `ನಾವು ಮಾನವ ಹಕ್ಕುಗಳ ಉಲ್ಲಂಘನೆ ಮಾಡುವುದಿಲ್ಲ, ಮತ್ತೊಬ್ಬರ ಹಕ್ಕುಗಳನ್ನು ರಕ್ಷಣೆ ಮಾಡುತ್ತೇವೆ’ ಎಂದು ಕೇವಲ ಪ್ರತಿಜ್ಞೆ ಮಾಡದೇ ಅದನ್ನು ಪಾಲನೆ ಮಾಡಿದಾಗ ಮಾತ್ರ ಮಾನವ ಹಕ್ಕುಗಳ ದಿನಾಚರಣೆಗೆ ಅರ್ಥ ಬರುತ್ತದೆ. ಪ್ರತಿಯೊಂದು ಜೀವಿಗಳಿಗೆ ನೀರು ಅತ್ಯಂತ ಅವಶ್ಯಕವಾಗಿದ್ದು, ನಾವುಗಳು ಅನಾವಶ್ಯಕವಾಗಿ ನೀರನ್ನು ವ್ಯಯ ಮಾಡದೇ ಅದನ್ನು ರಕ್ಷಣೆ ಮಾಡಬೇಕು. ಇದರ ಜೊತೆಗೆ ಪರಿಸರವನ್ನು ಮಾಲಿನ್ಯ ಮಾಡದೇ ಅದನ್ನು ಸಂರಕ್ಷಿಸಿ, ಮುಂದಿನ ಜನಾಂಗದವರಿಗೆ ಶುದ್ಧ ಪರಿಸರವನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರೂ ಹುಟ್ಟಿನಿಂದಲೇ ಜೀವಿಸುವ ಹಕ್ಕನ್ನು ಪಡೆದಿರುತ್ತಾರೆ. ಆ ಕಾರಣಕ್ಕಾಗಿ ನಮ್ಮ ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ಬಂದಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ಜೊತೆಗೆ ಇಂದಿರಾ ಆಹಾರ ಕಿಟ್ ಮೂಲಕ ಎಣ್ಣೆ, ಬೆಳೆ, ಸಕ್ಕರೆ, ಉಪ್ಪು ಹಾಗೂ ಇತರೆ ಅವಶ್ಯ ವಸ್ತುಗಳನ್ನು ಕೊಡಲಾಗುತ್ತಿದೆ ಎಂದು ಹೇಳಿದರು.
ಉದ್ಯೋಗದ ಬಗ್ಗೆ ನೋಡುವುದಾದರೆ, ಇವತ್ತು ಯಾವುದೇ ಒಂದು ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಕ್ಯಾಂಪಸ್ ಸಂದರ್ಶನ ನಡುಸಿದಾಗ, ಕೇವಲ ಶೇ.40 ಪ್ರತಿಶತ ಮಕ್ಕಳು ಉದ್ಯೋಗಕ್ಕೆ ಅರ್ಹರಿದ್ದಾರೆ ಎಂದು ಉದ್ಯೋಗದಾತರು ಹೇಳುತ್ತಾರೆ. ಉಳಿದ ಶೇ. 60ರಷ್ಟು ಮಕ್ಕಳು ಆಯ್ಕೆಯಾಗದಿರುವುದಕ್ಕೆ ಕಾರಣ ಅವರಲ್ಲಿನ ಕೌಶಲ್ಯಗಳ ಕೊರತೆಯನ್ನು ಕಾಣಬಹುದು. ಅದಕ್ಕಾಗಿ ಸರ್ಕಾರ ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿಗಳನ್ನು ಕೊಡುತ್ತಿದ್ದು, ಅವುಗಳನ್ನು ನಾವು ಸರಿಯಾಗಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಅರ್ಹರಾಗಬೇಕು. ಮಕ್ಕಳು ಇದರ ಕಡೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಒಬ್ಬ ಮನುಷ್ಯನನ್ನು ಮನುಷ್ಯನಾಗಿ ನೋಡಿಕೊಳ್ಳಲು ಅವಕಾಶ ಬೇಕು ಎನ್ನುವ ಕಾರಣಕ್ಕೆ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇಂತಹ ಅವಕಾಶಗಳನ್ನು ನೀಡಿದ್ದರು ಸಹ ಇಂದಿನ ದಿನಗಳಲ್ಲಿ ನಾವು ತಾರತಮ್ಯಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ನಮ್ಮ ಭಾಗದಲ್ಲಿ ಕೆಲವು ಕಡೆ ಇಂದಿಗೂ ಅಸ್ಪೃಶ್ಯತೆ ಆಚರಣೆಯನ್ನು ಅನುಸರಿಸಲಾಗುತ್ತಿದೆ. ಇದು ಒಂದು ಮಾನವ ಹಕ್ಕುಗಳ ಉಲ್ಲಂಘನೆಗೆ ಉದಾಹರಣೆಯಾಗಿದೆ. ಇಂತಹ ಆಚರಣೆಯನ್ನು ನಿರ್ಮೂಲನೆ ಮಾಡಿದಾಗ ಮಾನವ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದರು.
ಒಬ್ಬರ ಹಕ್ಕುಗಳನ್ನು ಮತ್ತೊಬ್ಬರು ಉಲ್ಲಂಘನೆ ಮಾಡದಂತೆ ನೊಡಿಕೊಳ್ಳಬೇಕು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಬಹಳಷ್ಟು ಹೋರಾಟಗಳನ್ನು ನಾವು ಕಾಣುತ್ತೇವೆ. ಆ ಎಲ್ಲಾ ಹೋರಾಟಗಳ ಫಲವನ್ನು ಈ ಸಂವಿಧಾನದಲ್ಲಿ ಕಂಡಿದ್ದೇವೆ. ಹಾಗಾಗಿ ಸಂವಿಧಾನದ ಆಶಯಗಳನ್ನು ನಾವು ಸಿರಿಯಾದ ರೀತಿಯಲ್ಲಿ ಪಾಲನೆ ಮಾಡಬೇಕು ಎನ್ನುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕುಕನೂರು ತಾಲ್ಲೂಕಿನ ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಭುರಾಜ್ ನಾಯಕ ಅವರು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕುರಿತು ಉಪನ್ಯಾಸ ನೀಡಿ, ಮಾನವ ಹಕ್ಕುಗಳು ಎಂದರೆ ಎಷ್ಟು ಸರಳವಾಗಿದೆ. ಆದರೆ, ಸರಳವಾಗಿರುವುದನ್ನು ಅಷ್ಟು ಸರಳವಾಗಿ ಸಾಮಾನ್ಯರಿಗೆ ಸಿಗಲು ಬಿಡುತ್ತಿಲ್ಲ. ಶುದ್ಧ ಗಾಳಿ ಮತ್ತು ನೀರು ಒಂದು ಮಾನವ ಹಕ್ಕಾಗಿದೆ. ಒಂದು ಶುದ್ಧ ಗಾಳಿ ನೂರು ಔಷಧಗಳಿಗೆ ಸಮ ಎನ್ನುವುದು ವಾಡಿಕೆ ಇದೆ. ಆದರೆ, ಇಂದು ಹಣ ಕೊಟ್ಟು ಬೆನ್ನು ಹಿಂದೆ ಗಾಳಿಯನ್ನು ಹೊತ್ತುಕೊಂಡು, ದುಡ್ಡು ಕೊಟ್ಟು ಬಾಟಲಿ ನೀರನ್ನು ಕುಡಿಯುವ ಸ್ಥಿತಿ ಬಂದಿದೆ. ಜಗತ್ತಿನಲ್ಲಿ ಮಾನವನಿಗೆ ಮಾನವ ಹಕ್ಕಾಗಿರುವ ಗಾಳಿ, ನೀರು ಸಿಗುತ್ತಿಲ್ಲ. ಆಹಾರದಲ್ಲಿ ಮಾಲಿನ್ಯತೆ ತುಂಬಿದೆ. ಕಲಬರಿಕೆ ಆಹಾರ ಸೇವನೆಯಿಂದ ಮಾನವನ ಜೀವಿತ ಅವದಿ ಕಡಿಮೆ ಯಾಗುತ್ತಿದೆ. ಒಟ್ಟಿನಲ್ಲಿ ಮಾನವ ಹಕ್ಕು ಎಂದರೆ, ಮನುಷ್ಯ ಹುಟ್ಟುವಾಗ ಯಾವ ರೀತಿಯಲ್ಲಿ ಸಹಜವಾಗಿ ಹುಟ್ಟುತ್ತಾನೆ, ಅದೇ ರೀತಿ ಸಹಜವಾಗಿ ಸಾಯುವತನಕ ಯಾವುದೇ ಸಮಸ್ಯೆ ಇಲ್ಲದೆ ಸುಖಮಯ ಜೀವನ ಸಾಗಿಸುವುದೇ ಮಾನವ ಹಕ್ಕು ಆಗಿದೆ ಎಂದು ಅವರು ಹೇಳಿದರು.
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕ ಹರೀಶ್ ಜೋಗಿ, ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago