Breaking News

ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

Simplification of land conversion rules: Minister Krishna Byre Gowda

Screenshot 2025 12 10 18 40 44 69 40deb401b9ffe8e1df2f1cc5ba480b125470856303453137355

ಬೆಳಗಾವಿ ಡಿಸೆಂಬರ್ 10: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ *ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.*

*ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ
ಉತ್ತರಿಸಿದರು*.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು
ಹೊರಡಿಸಲಾಗುವುದು ಎಂದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕ್ರೆ ವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ರಿನೀವಲ್ ಎನರ್ಜಿ ಯೋಜನೆ ಗಳಿಗೆ ಕನ್ವರ್ಶನ್ ಅಗತ್ಯವಿಲ್ಲ ಮತ್ತು ರೆವಿನ್ಯು ಕೋರ್ಟ್ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.