District level Cereal and Forgotten Dishes Cooking Competition: Applications invitedಕೊಪ್ಪಳ ಡಿಸೆಂಬರ್ 11, (ಕರ್ನಾಟಕ ವಾರ್ತೆ): ಅಂತರಾಷ್ಟಿçÃಯ ವಾಣಿಜ್ಯ ಮೇಳ 2026 ಪ್ರಯುಕ್ತ ಕೃಷಿ ಇಲಾಖೆಯಿಂದ ಡಿಸೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ ಆವರಣದಲ್ಲಿರುವ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 18 ರ ಒಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಕಛೇರಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಕಳುಹಿಸಬೇಕು.
2024-25 ನೇ ಸಾಲಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಜ್ಯ ಮಟ್ಟದಲ್ಲಿ ಮೊದಲನೇ, ದ್ವಿತೀಯ, ತೃತೀಯ ಬಹುಮಾನ ಪಡೆದ ಸ್ಪರ್ಧೆಗಳಿಗೆ ಪ್ರಸ್ತುತ ಸಾಲಿನಲ್ಲಿ ಅವಕಾಶವಿರುವುದಿಲ್ಲ. ಪ್ರತಿ ಸ್ಪರ್ಧಿಗಳಿಗೆ ಒಂದೇ ತಿನಿಸು, ಅಡುಗೆ (ಸಸ್ಯಹಾರಿ ತಿನಿಸು/ಅಡುಗೆ ಮಾತ್ರ), ಸಿಹಿ, ಖಾರ ಮತ್ತು ಮರೆತು ಹೋದ ಖಾದ್ಯಗಳ ತಿನಿಸು, ಅಡುಗೆ ಮಾಡಲು ಅವಕಾಶವಿರುತ್ತದೆ. ಸ್ಪರ್ಧಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿದ ಸಿರಿಧಾನ್ಯ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಡಿಸೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ತಾಲೂಕ ಪಂಚಾಯತ್ ಆವರಣದಲ್ಲಿ ಪ್ರದರ್ಶಿಸಬೇಕು.
ತಯಾರಿಸಿದ ತಿನಿಸು, ಅಡುಗೆಯ ಪ್ರದರ್ಶನ ತಯಾರಿಕೆಗೆ ಬಳಸಿದ ಪದಾರ್ಥಗಳು, ತೋರಿಕೆ, ರುಚಿ, ಸುವಾಸನೆ, ಪೌಷ್ಠಿಕತೆಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾ ಮಟ್ಟಕ್ಕೆ ಅತ್ಯುತ್ತಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳು ಮಾತ್ರ) ಮತ್ತು ಮರೆತು ಹೋದ ಖಾದ್ಯದ ತಿನಿಸನ್ನು ಅಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಮೊದಲನೇ, ದ್ವಿತೀಯ, ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ) ಖಾದ್ಯಗಳು ಮಾತ್ರ), ಮರೆತು ಹೋದ ಖಾದ್ಯದ ತಿನಿಸಿಗೆ ತಲಾ ರೂ.5000/-, ರೂ.3000/-, ರೂ.2000/- ಗಳನ್ನು
ನೀಡಲಾಗುವುದು.




