Various training from Haliyala RSETI Institute: Applications invitedಕೊಪ್ಪಳ ಡಿಸೆಂಬರ್ 12, (ಕರ್ನಾಟಕ ವಾರ್ತೆ): ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ(ರಿ) ವತಿಯಿಂದ ನಿರುದ್ಯೋಗಿ ಯುವಕರಿಗೆ ಇಲೆಕ್ಟಿçಕಲ್ ಬೈಕ್ ರಿಪೇರಿ ತರಬೇತಿ ಮತ್ತು ಜೆ.ಸಿ.ಬಿ ಚಾಲನಾ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 2026 ರ ಜನವರಿ ಮೊದಲ ವಾರದಿಂದ ತರಬೇತಿ ನೀಡಲಾಗುವುದು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಡಿಸೆಂಬರ್ 23 ಕೊನೆಯ ದಿನವಾಗಿದೆ.
ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಆಸಕ್ತರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ ಆನ್‌ಲೈನ್‌ನಲ್ಲಿ ವೆಬ್‌ಸೈಟ್: www.rsetihaliyal.org ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ದೂರವಾಣಿ ಸಂಖ್ಯೆ: 9980510717 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.





