ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು
ರಾಷ್ಟ್ರ ಮಟ್ಟಕ್ಕೆ ಕುಮಾರ ಮಂಜುನಾಥ ಆಯ್ಕೆ.
Kumar Manjunath, who won first place in the state-level pre-university college jump rope competition, was selected for the national level.

ಗಂಗಾವತಿ: ನಗರದ ಪ್ರತಿಷ್ಠಿತ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಕುಮಾರ ಮಂಜುನಾಥ ತಂ. ದೊಡ್ಡಪ್ಪ ಇವರು ಡಿಸೆಂಬರ್-೧೩ ಮತ್ತು ೧೪ ರಂದು ಹನುಮಸಾಗರದ ಇಂದಿರಾಗಾAಧಿ ವಸತಿ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈ ವಿದ್ಯಾರ್ಥಿಗೆ ಸಂಘದ ಸರ್ವ ಸದಸ್ಯರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಜಿ.ಹೆಚ್., ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಂಚಿನಾಳ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Kalyanasiri Kannada News Live 24×7 | News Karnataka