Shekhar Gowda Ramatnal's Koppal district tour program on December 18thಕೊಪ್ಪಳ ಡಿಸೆಂಬರ್ 17, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಡಿಸೆಂಬರ್ 18 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅAದು ಅವರು ಜಿಲ್ಲೆಯ ವಿವಿಧ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯತ್, ವಸತಿ ನಿಲಯ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು ಹಾಗೂ ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದಲ್ಲಿರುವ ವಿದ್ಯಾನಿಕೇನ ಪಬ್ಲಿಕ್ ಶಾಲೆಯಲ್ಲಿ ಜರುಗುವ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬAಧಿಸಿದ ಕಾನೂನುಗಳು ಹಾಗೂ ಮಕ್ಕಳ ಸುರಕ್ಷತೆ ಕುರಿತು ನಡೆಯುವ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಗಂಗಾವತಿ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka