
ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲೀಕ್ ಶಾಲೆಯಲ್ಲಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ

ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲೀಕ್ ಶಾಲೆಯಲ್ಲಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ
Take necessary steps to increase the revenue of the Municipal Council - Dr. Suresh Itnal
ಕೊಪ್ಪಳ ಡಿಸೆಂಬರ್ 18 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರ ನೇತೃತ್ವದಲ್ಲಿ ಗುರುವಾರ ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲೀಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಗಂಗಾವತಿ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಮೂಹ ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನುಗಳ ಕುರಿತು ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಮಾತನಾಡಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ-2005ರಡಿಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ರಚನೆಯಾಗಿದ್ದು, ರಾಜ್ಯದಲ್ಲಿ ಜುಲೈ-2009 ರಿಂದ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ವಿಚಾರಣೆಯನ್ನು ನಡೆಸುವ ಮತ್ತು ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ, ವರದಿಯಾದಲ್ಲಿ ಸೂ-ಮೋಟೋ ಅಧಿಕಾರದಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ವಿಚಾರಣೆಯನ್ನು ನಡೆಸುವ ಅಧಿಕಾರವನ್ನು ಹೊಂದಿದೆ. ಗ್ರಾಮ ಮಟ್ಟದಲ್ಲಿಯೂ ಸಹ ಈ ಕುರಿತು ಜಾಗೃತಿಯನ್ನು ಮೂಡಿಸಲು ಆಯೋಗದಿಂದ ಗ್ರಾಮ ಮಟ್ಟದಲ್ಲಿ ಮಕ್ಕಳ ಸಮಸ್ಯೆಗಳು, ಅಹವಾಲುಗಳನ್ನು ಆಲಿಸಿ ಪರಿಹಾರವನ್ನು ಕಂಡುಕೊಳ್ಳಲು “ಮಕ್ಕಳೊಂದಿಗೆ ಸಂವಾದ” ಎಂಬ ವಿನೂತನ ಕಾರ್ಯಕ್ರಮದ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದರು.
ಯಾರೇ ಮಕ್ಕಳು ದೈಹಿಕ, ಮಾನಸಿಕ, ಸಾಮಾಜಿಕ, ಭೌದ್ಧಿಕ ಮತ್ತು ಶಾರೀರಿಕ ಹಲ್ಲೆ, ದೌರ್ಜನ್ಯ ಮತ್ತು ಕಿರುಕುಳಗಳನ್ನು ಎದುರಿಸುತ್ತಿದ್ದಲ್ಲಿ ಅಥವಾ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕೃತ್ಯಗಳು ಇದ್ದಲ್ಲಿ ಅಥವಾ ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಇದ್ದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅಥವಾ ದೂರವಾಣಿ ಸಂಖ್ಯೆ: 080-22115290 92ಗೆ ಅಥವಾ www.kscpcr.karnataka.gov.
ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಗಂಗಾವತಿ ತಹಶೀಲ್ದಾರ ನಾಗರಾಜ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗರೆಡ್ಡಿ, ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಯ್ಯ, ಗಂಗಾವತಿ ಶಿಶು ಆಭಿವೃದ್ದಿ ಯೋಜನಾಧಿಕಾರಿ ಜಯಶ್ರೀ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶಿವಶಂಕರ, ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಅರಕ್ಷಕ ನಿರೀಕ್ಷಕ ರಂಗಪ್ಪ ದೊಡ್ಡಮನಿ, ಶ್ರೀರಾಮನಗರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಕರಡಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀನಿವಾಸ ಸೇರಿದಂತೆ ಶ್ರೀ ರಾಮನಗರದ ಸರಕಾರಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಶ್ರೀಮತಿ ಅ.ಕೆ.ಎ.ಆರ್.ಡಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




