
It is a matter of embarrassment for us that school children in Hanur constituency do not get drinking water: Sachiyara Priyanka Khar

ವರದಿ : ಬಂಗಾರಪ್ಪ .ಸಿ .
ಹನೂರು :: ಮಕ್ಕಳ ಸಭೆಯಲ್ಲಿ ಮಾತನಾಡಿದ ಸಚಿವರು ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಪ್ರಜಾಪ್ರಭುತ್ವದಲ್ಲಿ ಅಧಿಕಾರಿಗಳು ಕರ್ತವ್ಯ ಹೇಗೆ ನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತಂತ್ರಜ್ಞಾನದ ಮೂಲಕ ಸರ್ಕಾರಿ ಕಾರ್ಯಕ್ರಮದ ಮುಖೇನ ಪಂಚಾಯತ್ ರಾಜ್ ವ್ಯವಸ್ಥೆ ಅಡಿಯಲ್ಲಿ ಮಕ್ಕಳ ಹಕ್ಕುಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮದಾಗಿರಬೇಕು . ಅಸಿವು ಮುಕ್ತರಾಗಿ ಮಾಡೋಣ ,ಮಕ್ಕಳಿಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡೋಣ ,ಕಾರ್ಯವನ್ನು ಮಾಡಿದ ಸ್ಥಳಿಯ ಶಾಸಕರಿಗೆ ಧನ್ಯವಾದಗಳು ಜನರಿಗೆ ಮನೆ ಮನೆಗೆ ತಲಿಪಿಸುವ ಕಾರ್ಯವಾಗಲಿ , ಶಾಲೆಗಳಲ್ಲಿ ಕನಿಷ್ಟಪಕ್ಷ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಮುಜುಗರದ ಸಂಗಾತಿ ಎಂದು ಸಚಿವರಾದ ಪ್ರಿಯಾಂಕ ಖರ್ಗೆ ತಿಳಿಸಿದರು.

ಹನೂರು ತಾಲ್ಲೂಕಿನ ಮಣಗಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಯೋಜಿಸಿದ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ
ಶಾಸಕ ಎಂ.ಆರ್ ಮಂಜುನಾಥ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ತಾಲ್ಲೂಕಿನಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲೆ ಮಕ್ಕಳ ಗ್ರಾಮ ಸಭೆಯನ್ನು ಆಯೋಜನೆ ಮಾಡಲು ಅವಕಾಶ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಚಾಮರಾಜನಗರ ಜಿಲ್ಲೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಉತ್ತಮ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ತಮ್ಮ ಸುತ್ತಮುತ್ತಲಿನ ಶಾಲೆ ಹಾಗೂ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಸಚಿವರ ಜೊತೆ ಮಾತನಾಡಿ ಕಾರ್ಯಕ್ರಮದ ಸದುದ್ದೇಶವನ್ನು ತಿಳಿದುಕೊಂಡು ಪೂರಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ಮತ್ತು ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖಾಂತರ ಪಂಚತಂತ್ರ ತಂತ್ರಾಂಶವನ್ನು ಆರಂಭಿಸಿ ಈಗ ಕಾರ್ಯಕ್ರಮವನ್ನು ಸುಧಾರಿತ ಆವೃತ್ತಿಯಲ್ಲಿ ಚಾಲ್ತಿಯಲ್ಲಿದ್ದು ಪ್ರತಿಯೊಬ್ಬರ ನಾಗರಿಕರ ಆಸ್ತಿ ಸಂಬಂಧಿಸಿದಂತೆ ಅನುಮತಿ ಕಟ್ಟಡ ಮತ್ತು ವ್ಯಾಪಾರ ಬರವಣಿಗೆಗಳು ಮತ್ತು ದೂರುಗಳ ಸಲ್ಲಿಕೆ ಅಂತಹ ನಾಗರಿಕ ಸೇವೆಗಳನ್ನು ಒದಗಿಸಲು ಆಸ್ತಿ ತೆರಿಗೆ ಸಂಗ್ರಹಣೆಯನ್ನು ನಿರ್ವಹಣೆ ಮಾಡಲು ತಂತ್ರಜ್ಞಾನದ ಮೂಲಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಉತ್ತಮ ಕಾರ್ಯಕ್ರಮ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಲೂಕಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರ ನಾಗರಿಕರ ಮತ್ತು ಮಕ್ಕಳ ಅಭಿವೃದ್ಧಿ ಹೆಚ್ಚಿನ ಹೊತ್ತು ನೀಡಿದ್ದಾರೆ ಎಂದು ತಿಳಿಸಿದರು.
ಮಕ್ಕಳ ವಿಶೇಷ ಗ್ರಾಮ ಸಭೆ ರಾಜ್ಯಕ್ಕೆ ಅಲ್ಲ ದೇಶಕ್ಕೆ ಮಾದರಿ ಗ್ರಾಮ ಸಭೆ ಆಯೋಜಿಸಿರುವುದು ಮಕ್ಕಳ ಹಕ್ಕುಗಳ ಬೇಡಿಕೆಗೆ ಅನುಕೂಲಕ್ಕೆ ತಕ್ಕಂತೆ ಜನಪ್ರತಿನಿಧಿ ಅಧಿಕಾರಿಗಳು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಚಾಮರಾಜನಗರ ತಾಲೂಕು ಪಂಚಾಯಿತಿ ಹನೂರು ಮಣಗಳ್ಳಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿಯೇ ಮಾದರಿಯಾಗಿ ಮಕ್ಕಳ ವಿಶೇಷ ಗ್ರಾಮ ಸಭೆಯೇ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಕಾರ್ಯಕ್ರಮವನ್ನು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಉತ್ತಮವಾದ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಬೇಕಾಗಿರುವ ಮಾಹಿತಿ ತಂತ್ರಜ್ಞಾನ ಸಾಮರ್ಥ್ಯವನ್ನು ಜನ ಜನಸಾಮಾನ್ಯರಿಗೆ ಪಾರದರ್ಶಕತೆ ಮತ್ತು ಜನಸ್ನೇಹಿ ಆಡಳಿತ ನೀಡುವ ಹಿತದೃಷ್ಟಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಮಕ್ಕಳು ದೇಶದ ಆಸ್ತಿ ಹೀಗಾಗಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವ ರೀತಿಯಲ್ಲಿಯೂ ಕಾರ್ಯಕ್ರಮವನ್ನು ಜನಪ್ರತಿನಿಧಿ ಅಧಿಕಾರಿಗಳು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಚಿವರು ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು..
ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖಾಂತರ ಸರ್ಕಾರದಿಂದ ಸಿಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಶೂ ಹಾಗೂ ಅಕ್ಷರ ದಾಸೋಹ ದಿಂದ ಬಿಸಿಯೂಟ ವ್ಯವಸ್ಥೆ ಇನ್ನಿತರ ವ್ಯವಸ್ಥೆಗಳನ್ನು ಇಲಾಖೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದರು ಆರೋಗ್ಯ ಇಲಾಖೆಯ ಹಿರಿಯ ತಾಲೂಕು ವೈದ್ಯಾಧಿಕಾರಿ ಪ್ರಕಾಶ್ ಮಾತನಾಡಿ ಮಕ್ಕಳ ಗ್ರಾಮ ಸಭೆ ಆಯೋಜಿಸುವುದು ಉತ್ತಮ ಕಾರ್ಯಕ್ರಮವಾಗಿದ್ದು ಗ್ರಾಮಗಳಲ್ಲಿ ಬಾಲ್ಯ ವಿವಾಹ ತೊಡೆದು ಹಾಕಲು ಉತ್ತಮ ಕಾರ್ಯಕ್ರಮ ಇದಾಗಿದ್ದು ಆರೋಗ್ಯ ಇಲಾಖೆಯಲ್ಲಿ ಸಿಗುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಾಗರಿಕರು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಪೊಲೀಸ್ ಎಂದರೆ ಭಯಬೇಡ ನೇರವಾಗಿ ದೂರು ಸಲ್ಲಿಸಿ: ಮಕ್ಕಳ ಗ್ರಾಮ ಸಭೆಗೆ ಆಗಮಿಸಿ ಪೊಲಿಸ್ ಅಧಿಕಾರಿಗಳಾದ ಶಿವಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ಆಪ್ತ ಗೆಳತಿ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಮುಖಾಂತರ ಯಶಸ್ವಿಯಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿ, ಪೊಲೀಸ್ ಠಾಣೆ ಎಂದರೆ ಭಯಬೇಡ ನೇರವಾಗಿ ದೂರುಗಳಿದ್ದರೆ ಸಲ್ಲಿಸಿ ಭಯಮುಕ್ತರಾಗಿ ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೊಲೀಸ್ ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ಇದೇ ವೇಳೆಯಲ್ಲಿ ತಿಳಿಸಿದರು
ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಚಯ್ಯ,ಚಾಮುಲ್ ನಿರ್ದೇಶಕರಾದ ಮಹದೇವ ಪ್ರಸಾದ್,ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೆಂಕಟೇಶ್, ಪಶ್ಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು,ಕಾರ್ಯನಿರ್ವಹಣಾಧಿಕಾರಿ ಉಮೇಶ್,ಮಣ್ಣಗಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು,ಪ್ರೌಢ ಶಾಲೆಯ ಸ್ಥಳದ ದಾನಿಗಳಾದ ರಾಜು,ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ನಾಗರಿಕರು ಉಪಸ್ಥಿತರಿದ್ದರು




