ಕಲ್ಯಾಣಸಿರಿ ವಿಶೇಷ

ವಚನ ಸಾಹಿತ್ಯ ಸರ್ವಕಾಲಿಕ ಸತ್ಯ ಸಂಗತಿಗಳನ್ನು ಪ್ರತಿಪಾದಿಸುತ್ತದೆ

Vachana literature asserts timeless truths.

ಕೊಪ್ಪಳ,: ವಚನ ಸಾಹಿತ್ಯದ ಅಧ್ಯಯನದಿಂದ ಸರ್ವರಲ್ಲೂ ಸಮಾನತೆ ಸೋದರತ್ವದಿಂದ ಬಾಳುವ ಶಕ್ತಿ-ಯುಕ್ತಿಯನ್ನ ತುಂಬುತ್ತವೆ. ಆ ಕಾರಣಕ್ಕಾಗಿ ಅಂದು, ಇಂದು, ಮುಂದೆಯೂ ಕೂಡಾ ವಚನ ಸಾಹಿತ್ಯ ಸರ್ವಕಾಲಿಕ ಸತ್ಯ ಸಂಗತಿಗಳನ್ನು ಪ್ರತಿಪಾದಿಸುತ್ತದೆ ಎಂದು ಕೊಪ್ಪಳ ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕರಾದ ವೀರಭದ್ರಯ್ಯ ಹಿರೇಮಠ ಹೇಳಿದರು.

ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ನಡೆದ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಶಾಲೆಗೊಂದು ವಚನ ವಾಚನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಹನ್ನೆರಡೆನೆಯ ಶತಮಾನದ ಶರಣ-ಶರಣೆಯರ ನಡೆ ನುಡಿಗಳು ಇಂದಿಗೂ ಪ್ರಸುತ್ತ, ಅವರ ತತ್ವ ಸಿದ್ದಾಂತಗಳನ್ನು ಮಕ್ಕಳು, ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನ ಸಾರ್ಥವಾಗುತ್ತದೆ ಎಂದರು.ಇನ್ನೋರ್ವ ಮುಖ್ಯ ಅತಿಥಿಗಳಾದ ಸಂಗೀತ ಕಲಾವಿದರಾದ ಶ್ರೀಮತಿ ಅನ್ನಪೂರ್ಣ ಮನ್ನಾಪೂರು ಮಾತನಾಡಿ, ಶರಣರು-ಶರಣಿಯರು ಈ ನಾಡಿನ ದೇಶದ ಬೆಲೆ ಕಟ್ಟಲಾಗದ ಬಹು ದೊಡ್ಡ ಆಸ್ತಿಯಾಗಿದ್ದಾರೆ.

ನಾವು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಹಾಲು ತೊರಗೆ ಬೆಲ್ಲದ ಕೆಸರು ಸಕ್ಕರೆಯ ಮಳ್ಳಲಿನಂತೆಯಾಗುತ್ತದೆ. ಮಕ್ಕಳು ಈ ನಾಡಿನ ದೊಡ್ಡ ಆಸ್ತಿಯಾಗಿ ಬೆಳೆಯಬೇಕು ಹಾಗಾಗಿ ವಚನ ಸಾಹಿತ್ಯವನ್ನು ಓದಿ ಪಚನ ಮಾಡಿಕೊಂಡು ಮುನ್ನ ನಡೆದರೆ ನಿಮ್ಮ ಭವಿಷ್ಯ ಉಜ್ಜಲವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಜಿ.ಎಸ್. ಗೋನಾಳ ಹಾಗೂ ಶಿಕ್ಷಕರಾದ ಸಿದ್ದಪ್ಪ ಮೇಟಿ ಮಾತನಾಡಿದರು.ಪ್ರಾಸ್ತವಿಕವಾಗಿ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾದ ಮೈಲಾರಪ್ಪ ಉಂಕಿ ಮಾತನಾಡಿ, ನಮ್ಮ ಪರಿಷತ್ತಿನ ಉದ್ದೇಶ ಶಾಲೆಗೊಂದು ವಚನ ವಾಚನ ಕಾರ್ಯಕ್ರಮ ಮಾಡಿ ವಿದ್ಯಾರ್ಥಿಗಳಯಲ್ಲಿ ವಚನ ಸಾಹಿತ್ಯದಲ್ಲಿನ ಸಮಾನತೆಯ ತತ್ವ ಸಿದ್ದಾಂತಗಳನ್ನು ತಲುಪಿಸುವ ಕಾರ್ಯ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಯೆ ವ್ಯಕ್ತವಾಗಿದೆ ಎಂದರು,

ವಚನ ವಾಚನ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಮೆಹಬೂಬು ನದಾಪ, ಭವಾನಿ ಕೆಂಚನಗೌಡ್ರ, ಧನ್ಯ ಮಂಗಳೂರು, ಖುಷಿ ಟಣಕನಕಲ್, ಸುಶ್ಮಿತಾ ಪೂಜಾರ, ರಾಜೇಶ್ವರಿ ಇವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೃತುಂಜಯ ಮಳಿಮಠ ವಹಿಸಿದ್ದರು. ಕಾರ್ಯಕ್ರಮವನ್ನು ಸಿದ್ದಪ್ಪ ಮೇಟಿ ನಿರೂಪಿಸಿ, ವಂದಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago