SBI's Your Money, Your Rights campaign on December 29
ಎಸ್‌ಬಿಐ ನಿಂದ ಡಿ.29 ರಂದು ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನ

ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿ, ವಿಮಾ ಕಂತುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಖಾತೆಯಲ್ಲಿನ ಹಣವನ್ನು ಹಸ್ತಾಂತರಿಸುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ಖಾತೆದಾರರು, ಕಾನೂನು ಬದ್ಧ ವಾರಸುದಾರರು ಬ್ಯಾಂಕ್‌ಗಳಲ್ಲಿ 10 ವರ್ಷಗಳಿಗಿಂತಲೂ ಹೆಚ್ಚು ಕಾಲ ನಿಷ್ಕಿçಯವಾಗಿರುವ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ಸೂಕ್ತ ಅಗತ್ಯ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಭಾಗವಹಿಸಿ ಹಕ್ಕು ಪಡೆಯದ ಹಣವನ್ನು ಮರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಿಮ್ಮ ತಂದೆ, ತಾಯಿ, ಅಜ್ಜಿ, ತಾತಂದಿರು ಬ್ಯಾಂಕ್ ಖಾತೆಗಳಲ್ಲಿ ಹಣವಿಟ್ಟು ಮರೆತಿದ್ದರೆ ಅಂತಹ ಹಣವನ್ನು ಪಡೆಯಬಹುದು. ಈ ಖಾತೆಗಳಿಗೆ ನಾಮನಿರ್ದೇಶನ ಮಾಡಿದ್ದರೆ ಅಂತವರಿಗೆ ಹಣ ದೊರೆಯುತ್ತದೆ. ಇಲ್ಲದಿದ್ದರೆ ವಂಶವೃಕ್ಷ ಮತ್ತು ಪ್ರಮಾಣ ಪತ್ರಗಳನ್ನು ಪಡೆದು ಸಂಬAಧಿಸಿದ ವಾರಸುದಾರರಿಗೆ ಈ ನಿಷ್ಕಿçಯ ಖಾತೆಗಳಲ್ಲಿರುವ ಹಣ ನೀಡಲಾಗುತ್ತದೆ.
ನಿಷ್ಕಿçಯ ಖಾತೆಯಲ್ಲಿನ ಹಣದ ಮಾಹಿತಿಯನ್ನು https://udgram.rbi.org.in ನಲ್ಲಿ ಆನ್‌ಲೈನ್ ಮೂಲಕವೂ ಪಡೆಯಬಹುದು. ನಿಷ್ಕಿçಯ ಖಾತೆಗಳಿಗೆ ಸಂಬAಧಪಟ್ಟವರು ಅಂದು ಅಭಿಯಾನದಲ್ಲಿ ಪಾಲ್ಗೊಳ್ಳಬಹುದು. ಈ ಅಭಿಯಾನವು ಬ್ಯಾಂಕ್‌ಗಳಲ್ಲಿ ನಿರಂತರವಾಗಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಮಾರುತಿ ಕರ್ಪಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಸೇವಾ ಪ್ರಾಧಿಕಾರದಿಂದ ರಾಷ್ಟçಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಜ್ಯಾದ್ಯಂತ 2026ರ ಜನವರಿ 2 ರಿಂದ 90 ದಿನಗಳ ಕಾಲ ರಾಷ್ಟçಕ್ಕಾಗಿ ಮಧ್ಯಸ್ಥಿಕೆ 2.0 ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅಭಿಯಾನದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಳ್ಳಬಹÅದಾಗಿದೆ. ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ಭೂ ಸ್ವಾಧೀನ ಪ್ರಕರಣಗಳು, ಚೆಕುö್ಕ ಅಮಾನ್ಯದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ.
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವು ಬಗೆಹರಿಯುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹÅದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ, ಟೋಲ್ ಪಿs್ರÃ ಸಂಖ್ಯೆ 15100 ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹÅದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಮಹಾಂತೇಶ ದರಗದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ ನಗರಸಭೆ: ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾAಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ.
ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾAಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ. ಈ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ , ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬAಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಕರ್ನಾಟಕ-1 ಕೇಂದ್ರಗಳಲ್ಲಿ ಸಹ ನಾಗರೀಕರು ತಂತ್ರಾAಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9019788143, 9902061158, 7676701684, 8660686901, 9902599883 ವೆಬ್‌ಸೈಟ್ ವಿಳಾಸ www.eaasti.karnataka.gov.in ಅಥವಾ ನಗರಸಭೆಯ ಕಂದಾಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ನಗರಸಭೆ ಕಾರ್ಯಾಲಯದ ಪ್ರಕಟಣೆಯ ತಿಳಿಸಿದೆ.
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಡಿ.29 ರಂದು ಪೂರ್ವಭಾವಿ ಸಭೆ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): 2025-26 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ಡಿಸೆಂಬರ್ 29 ರಂದು ಸಂಜೆ 5.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ವಹಿಸಿಕೊಳ್ಳುವರು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಸಿಎಂ: ಪಿಎಚ್.ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): 2025-26 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ: 26/12/2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ, ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ, ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.3.50 ಲಕ್ಷ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿ.ಎಚ್‌ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ, ಫೆಲೋಶಿಫ್‌ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿ.ಎಚ್‌ಡಿ ಅಧ್ಯಯನದಲ್ಲಿ ತೊಡಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ವೀಕ್ಷಿಸಬಹುದು. ಸಹಾಯವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10.00 ರಿಂದ ಸಂಜೆ 5.30 ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.30 ರಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೆöÊಮಾಸಿಕ ಸಭೆ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೆöÊಮಾಸಿಕ ಸಭೆಯನ್ನು ಡಿಸೆಂಬರ್ 30 ರಂದು ಸಾಯಂಕಾಲ 5.15 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ವಹಿಸಿಕೊಳ್ಳುವರು. ಸಭೆಯಲ್ಲಿ ಪ್ರಾಧಿಕಾರದ ಮಾಸಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು. ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ
ಕೊಪ್ಪಳ ಡಿಸೆಂಬರ್ 26, (ಕರ್ನಾಟಕ ವಾರ್ತೆ): ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು 1.5 ಲಕ್ಷಗಳ ದಂಡ ಸಹಿತ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಗಂಗಾವತಿಯ ಎಚ್.ಆರ್.ಎಸ್ ಕಾಲೋನಿಯ ನಿವಾಸಿ ಹುಲ್ಲೇಶ ಕೊಜ್ಜ ಎಂಬ ಆರೋಪಿಯು ಪ್ರಕರಣದ ಅಪ್ರಾಪ್ತ ವಯಸ್ಸಿನ ಬಾಧಿತಳು ಶಾಲೆಗೆ ಹೋಗಿ ಬರುವಾಗ ಬಾಧಿತಳನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದನು. 2022 ರ ಸೆಪ್ಟೆಂಬರ್ 7 ರಂದು ಬೆಳಿಗೆಗ 9 ಗಂಟೆಗೆ ಬಾಧಿತಳು ಶಾಲೆಗೆ ಹೋಗುವ ಸಮಯದಲ್ಲಿ ಹೊಸಳ್ಳಿ ಕ್ರಾಸ್ ಹತ್ತಿರ ತನ್ನ ಮಾವನ ಮೋಟಾರ ಸೈಕಲ್ ತೆಗೆದುಕೊಂಡು ಬಂದು ಶಾಲೆಗೆ ಬಿಡುವುದಾಗಿ ಹೇಳಿ ಮೋಟಾರ್ ಸೈಕಲ್ ಮೇಲೆ ಹತ್ತುವಂತೆ ಹೇಳಿದಾಗ ಬಾಲಕಿ ನಿರಾಕರಿಸಿದ್ದಳು. ಅವಳನ್ನು ಹೆದರಿಸಿ ಮೋಟಾರ ಸೈಕಲ್ ಮೇಲೆ ಕೂಡಿಸಿಕೊಂಡು ಶಾಲೆಗೆ ಬಿಡದೇ ಬಲವಂತವಾಗಿ ಮಲ್ಲಾಪುರ ಸೀಮಾದ ವಾನಭದ್ರೇಶ್ವರ ಗುಡ್ಡಕ್ಕೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಅತ್ಯಾಚಾರ ಎಸಗಿದ್ದನು. ಹಾಗೂ ಈ ವಿಷಯವನ್ನು ಯಾರಿಗಾದರು ಹೇಳಿದಲ್ಲಿ ನಿನ್ನ ಮತ್ತು ನಿನ್ನ ಅಪ್ಪನನ್ನು ಸಾಯಿಸುವುದಾಗಿ ಜೀವ ಹೆದರಿಕೆ ಹಾಕಿದ್ದನು.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪೊಲೀಸ್ ನೀರಿಕ್ಷಕ ಮಂಜುನಾಥ ಎಸ್. ಅವರು ದೂರು ಸ್ವೀಕರಿಸಿ ಪ್ರಕರಣದ ತನಿಖೆಯನ್ನು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವು ಸ್ಪೇ.ಎಸ್‌ಸಿ[ಪೋಕ್ಸೊ] ಸಂ: 13/2024 ರಲ್ಲಿ ದಾಖಲಾಗಿ ವಿಚಾರಣೆಗೊಂಡಿದ್ದು, ವಿಚಾರಣೆಯನ್ನು ನಡೆಸಿದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಆರೋಪಿಯ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ಹಾಗೂ ರೂ. 1,50,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಡಿಸೆಂಬರ್ 19 ರಂದು ತೀರ್ಪು ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ವಿಶ್ವನಾಥ ಹಾಗೂ ಮಂಜುನಾಥ ಇವರು ನ್ಯಾಯಾಲಯದಲ್ಲಿ ಸಾಕ್ಷಿದಾರರನ್ನು ಸಕಾಲಕ್ಕೆ ಹಾಜರುಪಡಿಸಿ ಸಹಕರಿಸಿರುತ್ತಾರೆ ಎಂದು ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


