
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

Karnataka Legislative Council publishes final voter list for North East Teachers' Constituency

ಕೊಪ್ಪಳ ಡಿಸೆಂಬರ್ 30 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಡಾ. ಸುರೇಶ್ ಬಿ ಇಟ್ನಾಳ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಅರ್ಹತಾ ದಿನಾಂಕ: 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸಿಕೊಳ್ಳಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು. ಅದರಂತೆ, ದಿನಾಂಕ: 25.11.2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ದಿನಾಂಕ: 25.11.2025 ರಿಂದ 10.12.2025 ರವರೆಗೆ ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇಗೊಳಿಸಲಾಗಿ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 30.12.2025 ರಂದು ಪ್ರಚುರಪಡಿಸಲಾಗಿರುತ್ತದೆ. ಈ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಸಹಾಯಕ ಆಯುಕ್ತರ ಕಾರ್ಯಾಲಯ, ಕೊಪ್ಪಳ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರ ಕಾರ್ಯಾಲಯಗಳಲ್ಲಿ ವಿಕ್ಷೀಸಬಹುದಾಗಿರುತ್ತದೆ. ಅಲ್ಲದೇ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ವೆಬ್‌ಸೈಟ್ https://koppal.nic.in/en/election/ ನಲ್ಲಿ ವೀಕ್ಷಿಸಬಹುದಾಗಿರುತ್ತದೆ. ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿಯಲ್ಲಿ ನೋಂದಣಿಯಾಗಿರುವ ಮತದಾರರುಗಳ ವಿವರದಂತೆ ಗಂಗಾವತಿ, ಕನಕಗಿರಿ, ಕಾರಟಗಿ, ಕುಷ್ಟಗಿ, ಕುಕನೂರು, ಯಲಬುರ್ಗಾ ಹಾಗೂ ಕೊಪ್ಪಳ ತಾಲ್ಲೂಕುಗಳು ಸೇರಿ 1805 ಪುರಷ ಮತದಾರರು, 857 ಮಹಿಳಾ ಮತದಾರರು ಒಳಗೊಂಡು ಜಿಲ್ಲೆಯಲ್ಲಿ ಒಟ್ಟು 2662 ಮತದಾರರಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ಯಾರದರೂ ಅರ್ಹ ಶಿಕ್ಷಕ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ, ಇದೊಂದು ನಿರಂತರ ನೋಂದಣಿ ಪ್ರಕ್ರೀಯೆಯಾಗಿರುವ ಹಿನ್ನೆಲೆಯಲ್ಲಿ, ಅರ್ಹ ಶಿಕ್ಷಕ ಮತದಾರರು ನಮೂನೆ-19 ರೊಂದಿಗೆ ಅವಶ್ಯಕ ದಾಖಲೆಗಳನ್ನು ಸಂಬಂಧಪಟ್ಟ ತಹಶೀಲ್ದಾರ್ ರವರ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.




