
ಇಂದು ಡಿ.ಆರ್.ಪಾಟೀಲ ಅವರ ಕೊಪ್ಪಳ ಜಿಲ್ಲಾ ಪ್ರವಾಸ

D.R.Patila's Koppal district tour today

ಕೊಪ್ಪಳ ಡಿಸೆಂಬರ್ 31, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ಜನವರಿ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅವರು ಅಂದು ಬೆಳಿಗ್ಗೆ 9 ಗಂಟೆಗೆ ಗದಗನಿಂದ ನಿರ್ಗಮಿಸಿ 10 ಗಂಟೆಗೆ ಜಿಲ್ಲೆಯ ಹಾಲವರ್ತಿಗೆ ಆಗಮಿಸುವರು. ಬೆ.11 ಗಂಟೆಗೆ ಹಾಲವರ್ತಿ ಗ್ರಾಮ ಪಂಚಾಯತಿಯಲ್ಲಿ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಹಾಲವರ್ತಿ ಗ್ರಾಮ ಪಂಚಾಯತಿಯಲ್ಲಿ ಹಾಲವರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಸಭೆಯಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ತಳ ಮಟ್ಟದ ಯೋಜನೆಗಳನ್ನು ತಯಾರಿಸುವ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಭೆ ನಡೆಸುವರು.
ಸಂಜೆ 7.30 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಗದಗ ಕಡೆಗೆ ಪ್ರಯಾಣ ಬೆಳೆಸುವರು ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




