
ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ

Minister of State for Railways V. Somanna's tour of Koppal district

ಕೊಪ್ಪಳ ಡಿಸೆಂಬರ್ 31, (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು 2026ರ ಜನವರಿ 5 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅAದು ಬೆಳಿಗ್ಗೆ 10.30ಕ್ಕೆ ತೋರಣಗಲ್ ನಿಂದ ಹೊರಟು ವಿಶೇಷ ರೈಲಿನ ಮೂಲಕ 11.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳದ ಜಿಲ್ಲೆಯ ಗಿಣಿಗೇರಾ-ಮುನಿರಾಬಾದ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 77 ಕ್ಕೆ ಬದಲಾಗಿ ರೈಲ್ವೆ ಮೇಲ್ಸೇತುವೆ (ಆರ್ಒಬಿ) ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು.
ನಂತರ ಕೊಪ್ಪಳದಲ್ಲಿ ಆಯೋಜಿಸಲಾದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ಕೊಪ್ಪಳದ ಶ್ರೀ ಗವಿಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ಸಂಜೆ 6.30ಕ್ಕೆ ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ರೈಲ್ವೆ ರಾಜ್ಯ ಸಚಿವರ ವಿಭಾಗೀಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




