ಮಹನೀಯರ ಜಯಂತಿ: ಜ.8 ರಂದು ಪೂರ್ವಭಾವಿ ಸಭೆ
ಜಾಹೀರಾತು

Mahaniyar Jayanti: Preliminary meeting on January 8thಕೊಪ್ಪಳ ಜನವರಿ 06, (ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನವರಿ 19 ರಂದು ಆಚರಿಸಲಾಗುವ ಮಹಾಯೋಗಿ ವೇಮನ ಜಯಂತಿ ಹಾಗೂ ಜನವರಿ 21 ರಂದು ಆಚರಿಸಲಾಗುವ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಚರ್ಚಿಸಲು ಜನವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬAಧಿಸಿದ ಸಮುದಾಯದ ಮುಖಂಡರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




