
ಮಾದಪ್ಪನ ಹುಂಡಿಯಲ್ಲಿ ಕೋಟಿ ದಾಟಿದ ಕಾಣಿಕೆ ಹಣ .

Donations worth over a crore in Madappa's hundi.
ವರದಿ : ಬಂಗಾರಪ್ಪ .ಸಿ .
ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಮಾದಪ್ಪನ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು . ಕ್ಷೇತ್ರ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿನ ಸಭಾಂಗಣದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 29 ದಿನಗಳಲ್ಲಿ ಒಟ್ಟು ಮೊತ್ತ ರೂ.2,48,02,179.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 35 ಗ್ರಾಂ, ಬೆಳ್ಳಿ 01 ಕೆ.ಜಿ 062 ಗ್ರಾಂ ಹುಂಡಿಯಲ್ಲಿ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದರು .
ಎಣಿಕೆ ಸಮಯದ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಶ್ರೀ ಮರಿಸ್ವಾಮಿ, ಕಾಗಲವಾಡಿ, ಮಹದೇವಪ್ಪ ಕೀಳನಪುರ, ಗಂಗನ ತಿಮ್ಮಯ್ಯ ಮೆಲ್ಲಹಳ್ಳಿ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಶ್ರೀ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀ ಮಹೇಶ್ ಚಂದ್ರ, ಪ್ರ.ದ.ಸ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.




