ಕರ್ನಾಟಕ ಜಾನಪದ ಅಕಾಡೆಮಿ: ಫೆಲೋಶೀಪ್‌ಗಾಗಿ ಅರ್ಜಿ ಆಹ್ವಾನ
ಜಾಹೀರಾತು

Karnataka Janapada Academy: Applications invited for fellowshipಕೊಪ್ಪಳ ಜನವರಿ 08 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ. ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ (Synopsis)ವನ್ನು ಬರೆದು ಜನವರಿ 23 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಬೇಕು. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು.
ಫೆಲೋಶಿಪ್‌ಗಾಗಿ ಸಾಮಾನ್ಯ- 1, ಪರಿಶಿಷ್ಟ ಜಾತಿ – 5 ಮತ್ತು ಪರಿಶಿಷ್ಟ ಪಂಗಡ – 9 ಅಭ್ಯರ್ಥಿಗಳು ಸೇರಿದಂತೆ 15 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್: https://janapadakarnataka.gov.in ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




