ಅಂಬಿಗರ ಚೌಡಯ್ಯ ಜಯಂತಿ ಅದ್ದೂರಿಯಾಗಿ ಆಚರಿಸಲು ಕ್ರಮವಹಿಸಿ – ಸಿದ್ರಾಮೇಶ್ವರ
ಜಾಹೀರಾತು

Take steps to celebrate Ambigara Chowdaiah Jayanti in a grand manner - Sidrameshwarಕೊಪ್ಪಳ ಜನವರಿ 08 (ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅದ್ದೂರಿಯಾಗಿ ಆಚರಣೆಗೆ ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 21 ರಂದು ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 8.30ಕ್ಕೆ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೇರವಣಿಗೆಯು ನಗರದ ಸಿರಸಪ್ಪಯ್ಯನ ಮಠದ ಆವರಣದಿಂದ ಆರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಲಿದೆ. ನಂತರ 10.30 ಗಂಟೆಗೆ ನಗರದ ಸಾಹಿತ್ಯ ಭನವದಲ್ಲಿ ನಡೆಯಲಿರುವ ವೇದಿಕೆ ಸಮಾರಂಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಅಂಬಿಗರ ಚೌಡಯ್ಯ ಜಯಂತಿಯನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಕೆಲಸ ಹಂಚಿಕೆ ಮಾಡಿದಂತೆ ಆಯಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ದಿನದಂದು, ಸಾಹಿತ್ಯ ಭವನ ಮತ್ತು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಈ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಚರಿಸುವಂತಾಗಬೇಕು. ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪ ಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಸಮಾಜದ ಮುಖಂಡರಾದ ಸೋಮಣ್ಣ, ಹುಲುಗಪ್ಪ ಬಾರಕೇರ್, ರಮೇಶ್ ಕಬ್ಬೇರ್, ರಾಜು ಕಲಿಗಾರ, ಉದಯ ಕಬ್ಬೇರ್, ಶಿವಪ್ಪ ಕಬ್ಬೇರ್, ಪ್ರವೀಣ, ಹನುಮಂತಪ್ಪ ಗಿಡ್ಡಾಲಿ ಹಾಗೂ ಮತ್ತಿತರರು ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.