ರಾಜಕೀಯ

ಜ.11 ರಂದು ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಜ.11 ರಂದು ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಕೊಪ್ಪಳ ಜನವರಿ 09, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 11 ರಿಂದ 13 ರವರೆಗೆ 14 ರಿಂದ 17 ವರ್ಷ  ವಯೋಮಿತಿಯೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜ.11 ರಂದು ಬೆಳಿಗ್ಗೆ 11 ಗಂಟೆಗೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ್ ನಬಿಸಾಬ್ ದೋಟಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಸಹನಿರ್ದೇಶಕ(ದೈಹಿಕ ಶಿಕ್ಷಣ ವಿಭಾಗ) ಎನ್. ನರಸಿಂಹಯ್ಯ, ತಹಶೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಜುಮ್ಮನ್ನನವರ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago