
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಮಾದ್ಯಮ ವಕ್ತಾರರಾಗಿ ಮರಸಪ್ಪ ರವಿ ನೇಮಕ

Marasappa Ravi appointed as Bengaluru South District Congress Media Spokesperson.
ವರದಿ : ಬಂಗಾರಪ್ಪ .ಸಿ .
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ (ಡಿಸಿಸಿ) ಮಾಧ್ಯಮ ವಕ್ತರರಾಗಿ ಕನಕಪುರ ಪಟ್ಟಣದ ಮಳಗಾಳಿನ ಮರಸಪ್ಪ ರವಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ ಕೆಪಿಸಿಸಿ ಮಾಧ್ಯಮ ವಕ್ತಾರರು ಆಗಿರುವ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಮರಸಪ್ಪ ರವಿ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಮಾಧ್ಯಮ ವಕ್ತಾರರನ್ನಾಗಿ ನೇಮಿಸಿ ಆದೇಶ ಹೊಡಿಸಿದ್ದಾರೆ.
ಈ ಹಿಂದಿನ ರಾಮನಗರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುದೀರ್ಘ ಅವಧಿಗೆ ಮರಸಪ್ಪ ರವಿ ಮಾಧ್ಯಮ ವಕ್ತಾರರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಪುನಃ ಕೆಪಿಸಿಸಿ ಮಾಧ್ಯಮ ವಿಭಾಗ ಅವರನ್ನು ಮುಂದುವರೆಸಿದೆ. ಇದಕ್ಕೆ ಮರಸಪ್ಪ ರವಿ ಅವರು, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಧ್ಯಮ ವಕ್ತಾರರಾದ ರಮೇಶ್ ಬಾಬು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಅಭಿನಂದನೆ: ಬೆಂಗಳೂರು ದಕ್ಷಿಣ ಜಿಲ್ಲಾ ಮಾಧ್ಯಮ ವಕ್ತಾರರಾಗಿ ನೇಮಕಗೊಂಡಿರುವ ಮರಸಪ್ಪ ರವಿ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮತಿ ಪದಾಧಿಕಾರಿಗಳು ಹಾಗೂ ಅವರ ಹಿತೈಸಿಗಳು ಅಭಿನಂದನೆ ಸಲ್ಲಿಸಿದ್ದಾರೆ.




