
ಕಿಷ್ಕಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ
Farewell to Kishkinda II PUC students

ಗಂಗಾವತಿ : ಕಿಷ್ಕಿಂದ ಪಿಯು ಕಾಲೇಜ್
ಜಾಹೀರಾತು

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಡಾಕ್ಟರ್ ಚಂದ್ರಪ್ಪ ಜಿ,ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಹಲವಾರು ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ನೀಡಿ ಸಂಸ್ಕಾರವಂತ ವ್ಯಕ್ತಿಗಳನ್ನು ನಮ್ಮ ಸಂಸ್ಥೆ ಸಮಾಜಕ್ಕೆ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಸುರೇಶ್ ಕುಲಕರ್ಣಿ ಇವರು ಮಾತನಾಡಿ
ಪಾಲಕರು ಹಲವಾರು ಕಷ್ಟದ ನಡುವೆಯೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ವಿದ್ಯಾರ್ಥಿಗಳು ಮೊಬೈಲ್ ಚಾಳಿಗೆ ಬಿದ್ದು ತಮ್ಮ ಶೈಕ್ಷಣಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಕಳೆಹೀನರಾಗುತ್ತಿದ್ದು, ಅವರ ಭವಿಷ್ಯವನ್ನ ಚಿಕ್ಕ ವಯಸ್ಸಿನಲ್ಲಿ ಹಾಳು ಮಾಡಿಕೊಂಡು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ಮೂಲಕ ತಮ್ಮ ಜೀವನವನ್ನ ಅಂತ್ಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಆದ್ದರಿಂದ ಪಾಲಕರು ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಕಿವಿಮಾತು ಹೇಳಿದರು.
ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು
ಈ ಸಂದರ್ಭದಲ್ಲಿ ಡಾಕ್ಟರ್ ಮಲ್ಲನಗೌಡ ಹೆಚ್,
ಡಾಕ್ಟರ್ ನಾಗರಾಜ್ ಎಚ್, ಡಾಕ್ಟರ್ ದೇವರಾಜ್ ಜಿ,
ಆಡಳಿತ ಅಧಿಕಾರಿ ಎಲ್ ವೀರಭದ್ರ ರಾವ್,ಪ್ರಾಂಶುಪಾಲರಾದ ಶ್ರೀ ಮುರಳಿಕೃಷ್ಣ ಉಪನ್ಯಾಸಕ ವೃಂದ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




