filter: null; fileterIntensity: null; filterMask: null; captureOrientation: 180; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; motionR: 0; delta:null; bokeh:0; module: document;hw-remosaic: false;touch: (-1.0, -1.0);sceneMode: 8;cct_value: 0;AI_Scene: (12, 2);aec_lux: 240.84645;aec_lux_index: 0;albedo: ;confidence: ;motionLevel: 0;weatherinfo: null;temperature: 35;
ಜ. 16 ರಂದು ಕಾರಟಗಿಯಲ್ಲಿ ಸೌರ್ಹಾದ ಜಾನಪದ ಸಂಭ್ರಮ

Saurha folk festival in Karatagi on Jan. 16

algolist: 0;
multi-frame: 1;
brp_mask:0;
brp_del_th:0.0000,0.0000;
brp_del_sen:0.0000,0.0000;
motionR: 0;
delta:null;
bokeh:0;
module: document;hw-remosaic: false;touch: (-1.0, -1.0);sceneMode: 8;cct_value: 0;AI_Scene: (12, 2);aec_lux: 240.84645;aec_lux_index: 0;albedo: ;confidence: ;motionLevel: 0;weatherinfo: null;temperature: 35;
ಕೊಪ್ಪಳ ಜನವರಿ 14 (ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ “ಸೌರ್ಹಾದ ಜಾನಪದ ಸಂಭ್ರಮ” ಭಾವೈಕ್ಯತೆಯ ಹಾಡು ಹಾಡೋಣ ಬಾರಾ… ಕಾರ್ಯಕ್ರಮವನ್ನು ಜನವರಿ 16 ರಂದು ಸಂಜೆ 4.30 ಗಂಟೆಗೆ ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಮತ್ತು ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಅವರು ಘನ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಕಾರಟಗಿ ತಹಶೀಲ್ದಾರ ಎಂ. ಕುಮಾರಸ್ವಾಮಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಕಾರಟಗಿ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೆಕಾರ್, ಕಾರಟಗಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸುಧೀರ್ ಎಂ. ಬೆಂಕಿ, ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಅರಳಿ, ಕಾರಟಗಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ದೇವಪ್ಪ ಭಾವಿಕಟ್ಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾರಟಗಿ ಅಧ್ಯಕ್ಷರಾದ ಹನುಮಂತಪ್ಪ ನಾಯಕ್, ಪುರಸಭೆ ಸದಸ್ಯ ಸೋಮಶೇಖರಪ್ಪ ಬೇರಗಿ, ಕಾರಟಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರಿ ಪ್ರಾಚಾರ್ಯರಾದ ನಾಗರಾಜ ಮೈನಳ್ಳಿ ಅವರು ಪಾಲ್ಗೊಳ್ಳುವರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಡಾ. ಜೀವನಸಾಬ ವಾಲಿಕಾರ ಬಿನ್ನಾಳ ಅವರು “ಜಾನಪದ ಸಾಹಿತ್ಯದಲ್ಲಿ ಸೌಹಾರ್ದತೆ” ವಿಷಯದ ಕುರಿತು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರು, ಕಲಾವಿದರು ಉಪಸ್ಥಿತರಿರುವರು. ವಿವಿಧ ಕಲಾತಂಡಗಳು ಸಹ ಭಾಗವಿಸಲಿವೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಮಹೆಬೂಬ್ ಕಿಲ್ಲೇದಾರ್ ಹಾಗೂ ರಿಜಿಸ್ಟ್ರಾರ್ ಎನ್.ನಮ್ರತ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜ. 19 ಮತ್ತು 20 ರಂದು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು
—-
ಕೊಪ್ಪಳ ಜನವರಿ 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಶಾಖೆ ವತಿಯಿಂದ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 19 & 20 ಸೋಮವಾರ ಮತ್ತು ಮಂಗಳವಾರದಂದು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಜ. 19ರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ರಾಬಕೊವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಮತ್ತು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಬಾಗಲಕೋಟೆ ಕೃಷ್ಣ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಹಾಗೂ ಕೊಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಆರ್. ಜುಮ್ಮನ್ನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸರ್ಕಾರಿ ನೌಕರರ ಕ್ರೀಡಾಕೂಟ ಸಂಘಟನಾ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಠ್ಠಲ ಜಾಬಗೌಡರ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರು, ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳು, ಮತ್ತು ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಹಾಗೂ ಎಲ್ಲಾ ತಾಲ್ಲೂಕಾ, ಯೋಜನಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


