
ಕಾಯಕ ಶರಣರ ಹಾಗೂ ಮಹನೀಯರ ಜಯಂತಿಗಳನ್ನು
ಅರ್ಥಪೂರ್ಣವಾಗಿ ಆಚರಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Celebrate the anniversaries of Kayak Sharan and Mahaniyya meaningfully – Additional District Commissioner Sidrameshwar

ಕೊಪ್ಪಳ ಜನವರಿ 16 (ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ವರ್ಷವು ಕಾಯಕ ಶರಣರ ಹಾಗೂ ಮಹನಿಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಾಯಕ ಶರಣರ ಮತ್ತು ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಾಯಕ ಶರಣರ ಜಯಂತಿ ಫೆಬ್ರವರಿ 10 ರಂದು ಸರಳವಾಗಿ ಪ್ರತಿ ವರ್ಷದಂತೆ ಈ ವರ್ಷವು ಆಚರಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿಬೇಕೆಂದು ಹೇಳಿದರು.
ಫೆಬ್ರವರಿ 16 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು. ಅಂದು ಬೆಳಿಗ್ಗೆ 10 ಗಂಟೆಗೆ ಗಡಿಯಾರ ಕಂಬ ವೃತ್ತದಿಂದ ಸಾಹಿತ್ಯ ಭವನದವರೆಗೆ ಮಾಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು ಇದರಲ್ಲಿ ಎಲ್ಲರೂ ಭಾಗವಹಿಸಬೇಕು. ವೇದಿಕೆ ಕಾರ್ಯಕ್ರಮ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದರು.
ಸವಿತಾ ಮಹರ್ಷಿ ಜಯಂತಿ ಜನವರಿ 25 ರಂದು ಸರಳವಾಗಿ ಆಚರಿಸಲಾಗುತ್ತದೆ. ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಈ ಎಲ್ಲಾ ಮಹನೀಯರ ಜಯಂತಿ ಕಾರ್ಯಕ್ರಮಗಳ ದಿನದಂದು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕೆಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಸವಿತಾ ಸಮಾಜದ ಮುಖಂಡರಾದ ತುಕಾರಾಂ, ಮಾರುತಿ ಸುಗೂರ, ನಾಗರಾಜ ಕಂಪ್ಲಿ, ದೇವಪ್ಪ ಹಡಪದ, ಮಡಿವಾಳ ಸಮಾಜದ ಮುಖಂಡರಾದ ಕೃಷ್ಣ ಮಡಿವಾಳ, ರಾಮಣ್ಣ ಕುಟಗನಹಳ್ಳಿ, ಗವಿಸಿದ್ದಪ್ಪ ಮಡಿವಾಳ, ಕಿರಣ ಮಡಿವಾಳ, ಕಾಯಕ ಶರಣರ ಸಮಾಜದ ಮುಖಂಡರಾದ ಡಾ. ಬಿ. ಜ್ಞಾನಸುಂದರ್, ರಾಮಣ್ಣ ಕಂದಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.





