The short URL of the present article is: https://kalyanasiri.in/q3di
ಜ. 22 ರಂದು ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
Koppal Taluk Guarantee Schemes Progress Review Meeting on Jan. 22
ಕೊಪ್ಪಳ ಜನವರಿ 19 (ಕರ್ನಾಟಕ ವಾರ್ತೆ): ಜನವರಿ 20 ರಂದು ನಿಗದಿಯಾಗಿದ್ದ ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಿ, ಜ. 22 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು

The short URL of the present article is: https://kalyanasiri.in/q3di




