ಕಲ್ಯಾಣಸಿರಿ ವಿಶೇಷ

ಮಹಾಯೋಗಿ ವೇಮನ ಜಯಂತಿ: ಮಾನವ ಕುಲದ ಏಳಿಗಾಗಿ ಶ್ರಮಿಸಿದ್ದ ವೇಮನವರು – ಹೇಮಲತಾ ನಾಯಕ

Mahayogi Veman Jayanti: Veman worked hard for the betterment of mankind – Hemalatha Nayak


ಮಹಾಯೋಗಿ ವೇಮನ ಜಯಂತಿ: ಮಾನವ ಕುಲದ ಏಳಿಗಾಗಿ ಶ್ರಮಿಸಿದ್ದ ವೇಮನವರು – ಹೇಮಲತಾ ನಾಯಕ


ಕೊಪ್ಪಳ ಜನವರಿ 19 (ಕರ್ನಾಟಕ ವಾರ್ತೆ): ಮಾನವ ಕುಲದ ಏಳಿಗಾಗಿ ಶ್ರಮಿಸಿದ್ದವರು ಮಹಾಯೋಗಿ ವೇಮನವರು ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು.
 ಅವರು ಸೋಮವಾರ ಕೊಪ್ಪಳ ನಗರದ ಕಿನ್ನಾಳ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಾಯೋಗಿ ವೇಮನ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
 ಮಹಾಯೋಗಿ ವೇಮನರು ಮಾನವತಾವಾದಿ ಮೌಲ್ಯಗಳ ಮೂಲಕ ತನ್ನನ್ನು ತಾನು ಪರಿವರ್ತೆನೆ ಮಾಡಿ, ಜೊತೆಗೆ ಸಮಾಜದ ಪರಿವರ್ತನೆಗೆ ಶ್ರಮೀಸಿದವರು. ಸಮಾಜದಲ್ಲಿನ ಅಂಕು-ಡೊAಕು ವ್ಯವಸ್ಥೆಯನ್ನು ತಿದ್ದುವಂತಹ ಪ್ರಯತ್ನ ಮಾಡಿದ ವೇಮನರು, ಮನುಷ್ಯರಲ್ಲಿ ಜೀವನ ಮೌಲ್ಯಗಳನ್ನು ಜಾಗೃತಗೊಳಿಸಿದ ಸಾಧಕರಾಗಿದ್ದಾರೆ. ಸಮಾಜದಲ್ಲಿ ಮನುಷ್ಯತ್ವದ ಮೌಲ್ಯಗಳು ಶ್ರೇಷ್ಠವಾಗಿವೆ ಎಂದು ತಮ್ಮ ಸಂದೇಶಗಳಲ್ಲಿ ಸಾರಿದ್ದಾರೆ. ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮರವರು ನೀಡಿದ ಬೋಧನೆಯನ್ನು ಅರಿತುಕೊಂಡು ಅಂದಿನ ಕಾಲದ ಸ್ಥಿತಿಗತಿಗಳಿಂದ ವೇಮನರು ಮಹಾಯೋಗಿಗಳಾದರು. ಇಂತಹ ಮಹನೀಯರ ತತ್ವ ಆದರ್ಶಗಳನ್ನು ತಿಳಿದುಕೊಳ್ಳುವುದಷ್ಟೆ ಅಲ್ಲದೇ, ಅವುಗಳನ್ನು ಪಾಲನೆ ಮಾಡುವುದು ಸಹ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
 ಮಾಜಿ ಶಾಸಕರಾದ ಕೆ.ಬಸವರಾಜ ಹಿಟ್ನಾಳ ಅವರು ಮಾತನಾಡಿ, 15ನೇ ಶತಮಾನದಲ್ಲಿ ಆಂದ್ರಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ, ಸಮಾಜ ಚಿಂತಕ, ಮಾನವಕುಲದ ಏಳ್ಗೆಗಾಗಿ ಶ್ರಮಿಸಿದ ಮಹಾಯೋಗಿ ವೇಮನರ ತತ್ವ ಮತ್ತು ಆದರ್ಶಗಳನ್ನು ನಾವೆಲ್ಲರು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
 ಕೊಪ್ಪಳದ ನಿವೃತ್ತ ಪ್ರಾಚಾರ್ಯರಾದ ಡಾ. ವ್ಹಿ.ಬಿ ರಡ್ಡೇರ್ ಅವರು ಮಹಾಯೋಗಿ ವೇಮನರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವೇಮನರು ಸರಳ ಭಾಷೆಯಲ್ಲಿ ಚತುಷ್ಪದಿಗಳನ್ನು ರಚಿಸುವ ಮೂಲಕ ಜನರಲ್ಲಿನ ಜೀವನದ ಮೌಲ್ಯಗಳನ್ನು ಜಾಗೃತಗೊಳಿಸಿದರು. ವಿವಿಧ ಭಾಷೆಗಳಲ್ಲಿ ಪ್ರಕಟಗೊಂಡ ವೇಮನರ ಪದ್ಯಗಳಿಗೆ ವಿದೇಶಿಗರಿಂದಲೂ ಸಹ ಪ್ರಶಂಸೆ ವ್ಯಕ್ತವಾಗಿದೆ. ಇಂತಹ ಅನೇಕ ಮಹನೀಯರು ನಮಗೆ ಚಿಕಿತ್ಸಕ ರೀತಿಯಲ್ಲಿದ್ದಾರೆ. ಜಗತ್ತಿಗೆ ದಾರ್ಶನಿಕರು ಸಿದ್ದಾಂತಗಳನ್ನು ಬಿಟ್ಟು ಹೋಗಿದ್ದು, ಅವುಗಳ ಮೇಲೆ ನಾವೆಲ್ಲರೂ ನಡೆಯಬೇಕು. ಕಾಲ ಕಾಲಕ್ಕೆ ಶರಣರು, ಶರಣ ಪರಂಪರೆ, ದಾಸರು, ದಾಸ ಪರಂಪರೆ ಹೀಗೆ ಹಲವಾರು ಮಹನೀಯರು ತಮ್ಮ ತತ್ವಾದರ್ಶಗಳು, ವೈಜ್ಞಾನಿಕ ಚಿಂತನೆಗಳ ಮೂಲಕ ಸಮಾಜ ಸುಧಾರಣೆಗಾಗಿ ಶ್ರಮಿಸುವುದರ ಜೊತೆಗೆ ಮಾನವ ಜೀವನ ವಾಸ್ತವ್ಯಗಳನ್ನು ತಿಳಿಸಿದ್ದಾರೆ. ಅಂತಹ ಮಹನೀಯರಲ್ಲಿ ವೇಮನರು ಒಬ್ಬರು. ಮಹಾಯೋಗಿ ವೇಮನವರು ದಕ್ಷಿಣ ಭಾರತದ ಮಧ್ಯಕಾಲೀನ ಭಾರತದಲ್ಲಿ ಸಮಾಜದಲ್ಲಿನ ಸ್ಥಿತಿಗತಿಗಳನ್ನು ಅರಿತುಕೊಂಡು ಸಮಾಜದ ಒಳಿತಿಗಾಗಿ ಮಹಾನ್ ಶರಣರಾಗಿ, ಸಂತರಾಗಿ ಹಾಗೂ ದಾಸರಾಗಿ ವೈಚಾರಿಕತೆಯ ವಿಚಾರಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಮೂಲಕ ಮಹಾಯೋಗಿಗಳಾಗಿದ್ದಾರೆ ಎಂದು ತಿಳಿಸಿದರು.
 ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ ನಾಗರಳ್ಳಿ ಹಾಗೂ ಎಚ್.ಎಲ್ ಹಿರೇಗೌಡರ, ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾದ ಜಗದೀಶ್ವರಪ್ಪ ಸಿಂಗ್ನಾಳ, ಮುಖಂಡರಾದ ಬಸವರಾಜ ಪುರದ, ಕಾಶಿನಾಥರೆಡ್ಡಿ, ವಿರೂಪಾಕ್ಷಪ್ಪ ಹಳ್ಳಿಗುಡಿ, ಚಂದ್ರಶೇಖರಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago