
ಜಿಲ್ಲಾ ಕಾಂಗ್ರೆಸ್ ಓಬಿಸಿ ಉಪಾಧ್ಯಕ್ಷರಾಗಿ ವರಗಳ ಶೆಟ್ಟಿ ನೇಮಕ

Varagala Shetty appointed as District Congress OBC Vice President

ವರದಿ: ಬಂಗಾರಪ್ಪ .ಸಿ
ಚಾಮರಾಜನಗರ : ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಯುತ ವರಗಳ ಶೆಟ್ಟಿಯಾದ ನಮ್ಮನ್ನು ನೇಮಕ ಮಾಡಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಪಕ್ಷದ ಕೊಡುಗೆ ಮತ್ತು ಸಂಘಟನೆಗಳಲ್ಲಿ ಹಿಂದುಳಿದ ವರ್ಗಗಳ ಯುವಕರು ಮತ್ತು ಮಹಿಳೆಯರನ್ನು ಸಂಘಟಿಸಿ,
ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಕ್ಕೆ ನನ್ನನ್ನು ನೇಮಕ ಮಾಡಲು ಕಾರಣಕರ್ತರಾದ ಹನೂರು ವಿಧಾನ ಸಭಾ ಮಾಜಿ ಶಾಸಕರಾದ ಆರ್ ನರೇಂದ್ರ ,ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಚೇತನ್ ಕುಮಾರ್ ಹಾಗೂ ಪಕ್ಷದ ಎಲ್ಲಾ ಮುಖಂಡರು ಹಾಗೂ ಪದಾಧಿಕಾರಿಗಳಿಗೆ ಹೃದಯ ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ವರಗಳ ಶೆಟ್ಟಿ ತಿಳಿಸಿದರು.


