
18 ವರ್ಷ ಮೇಲ್ಪಟ್ಟವರು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ
ವಡ್ಡರಹಟ್ಟಿ ಗ್ರಾಪಂ ಅಭಿವೃಧ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಹೇಳಿಕೆ

Those above 18 years of age should register their names in the voter list - Development Officer Suresh Chalwadi

ಗಂಗಾವತಿ: 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು, ಈ ಬಗ್ಗೆ ವಿದ್ಯಾವಂತ ಯುವಕರು ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ರಾಪಂ ಅಭಿವೃಧ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಹೇಳಿದರು.
ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ʼನನ್ನ ಭಾರತ, ನನ್ನ ಮತ” (My India, My Vote) ಎಂಬ ವಿಶೇಷ ಧೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗಿದೆ. ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆಗಳು ನಡೆಯಲಿದ್ದು, ಎಲ್ಲರೂ ಚುನಾವಣೆ ಗುರುತಿನ ಚೀಟಿಗಳನ್ನು ನವೀಕರಣ ಮಾಡಿಕೊಳ್ಳಬೇಕು. ಚುನಾವಣೆಗಳಲ್ಲಿ ಶೇ.100 ಮತದಾನ ಆಬೇಕು ಎಂದರು.
ನಂತರ ಮತದಾನ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ಗ್ರಾಪಂ ಸದಸ್ಯರಾದ ಪ್ರಭುದಾಸ್, ಕನಕರಾಯ, ಹುಸೇನಪ್ಪ ಬಂಡೆನಾಯಕ್, ಮುಖಂಡರಾದ ಹನುಮಂತಪ್ಪ ಹತ್ತಿಮರದ, ಹೊನ್ನಪ್ಪ ಪೂಜಾರಿ, ಅಮರೇಶ, ಮಂಜುನಾಥ್ ಸೇರಿ ಗ್ರಾಪಂ ಸಿಬ್ಬಂದಿಗಳು ಇದ್ದರು.





