ಕಾಂಗ್ರೆಸ್ ಪ್ರಚಾರ ಸಮಿತಿಯ ಹನೂರು ವಿಧಾನ ಸಭಾ ಕ್ಷೇತ್ರದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಶ್ರೀ ಆರ್ ಸಿದ್ದರಾಜು.
Shri R. Siddharaju has been appointed as the District Vice President of the Congress Campaign Committee for Hanur Assembly Constituency
ವರದಿ : ಬಂಗಾರಪ್ಪ .ಸಿ.
ಹನೂರು: ಚಾ.ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರೂ ಆದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಡಾ.ಎಸ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೇಮಕಾತಿ ಸಭೆಯಲ್ಲಿ ಆರ್ ಸಿದ್ದರಾಜು ಆದ ನನ್ನನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಹನೂರು ವಿಧಾನಸಭಾ ಕ್ಷೇತ್ರದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಾತಿ ಮಾಡಿ ಆದೇಶ ಪ್ರತಿ ನೀಡಿದರು. ಈ ಸಂಬಂದವಾಗಿ ಮಾತನಾಡಿದ ಅವರು , ಮಾಜಿ ಶಾಸಕ ಆರ್. ನರೇಂದ್ರಣ್ಣರವರ ಆರ್ಶಿವಾದದಂತೆ ನಮ್ಮಪಕ್ಷಕ್ಕಾಗಿ ಕಾಯವಾಚ ಮನಸ ದುಡಿದು ಪಕ್ಷಕ್ಕೆ ಮತ್ತು ನಮ್ಮ ಮುಖಂಡರಾದ ನರೇಂದ್ರರವರ ಕೈ ಬಲ ಪಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಇತರೆ ಹಿರಿಯ ನಾಯಕರು ಪಕ್ಷದ ಸಂಘಟನೆಯ ಕಾರ್ಯವೈಖರಿಯನ್ನು ಮೆಚ್ಚಿ ನನಗೆ ಕರ್ನಾಟಕ ಕಾಂಗ್ರೇಸ್ ಪ್ರಚಾರ ಸಮಿತಿಯ ಹನೂರು ವಿಧಾನ ಸಭಾ ಕ್ಷೇತ್ರದ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅದರಂತೆಯೇ ಎಲ್ಲರ ಸಹಕಾರ ಪಡೆದು ಪಕ್ಷದ ಕಾರ್ಯಕ್ರಮಗಳ ಪ್ರಚಾರದ ಜತೆಗೆ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಎ.ಆರ್ ಕೃಷ್ಣಮೂರ್ತಿ, ಮಾಜಿ ಶಾಸಕ ಆರ್. ನರೇಂದ್ರ, ಶಾಸಕರುಗಳಾದ ಎಮ್ ಗಣೇಶ್ ಪ್ರಸಾದ್ ,ಪುಟ್ಟರಂಗಶೇಟ್ಟಿ , ಉದ್ಯಮಿ ಪೊನ್ನಾಚಿ ರಂಗಸ್ವಾಮಿ, ಚಾಮುಲ್ ನಂಜುಂಡಸ್ವಾಮಿ, ಹನೂರು, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದವರ್ಮ ,ಈಶ್ಚರ್ , ಕಾಡಾ ಅಧ್ಯಕ್ಷ ಮರಿಸ್ವಾಮಿ,ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಚಂದ್ರು, ಹಾಗೂ ಇನ್ನಿತರರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…