ಕೊಲೆ ಆರೋಪಿ ಅಮುಲ್ ರಾಜ್ ನಿಗೆ ಜೀವವಧಿ ಶಿಕ್ಷೆ ಪ್ರಕಟಿಸಿದ ಕೊಳ್ಳೆಗಾಲದ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಲಯ .‌

ಕೊಲೆ ಆರೋಪಿ ಅಮುಲ್ ರಾಜ್ ನಿಗೆ ಜೀವವಧಿ ಶಿಕ್ಷೆ ಪ್ರಕಟಿಸಿದ ಕೊಳ್ಳೆಗಾಲದ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಲಯ .‌

The Kollegala Apar District and Sessions Court has sentenced murder accused Amul Raj to life imprisonment

ವರದಿ: ಬಂಗಾರಪ್ಪ .ಸಿ .‌
ಹನೂರು :ಪತ್ರಸಂಖ್ಯೆ:-ಸಅ:ಅಜಿಸನ್ಯಾ:ಶಿಕ್ಷೆ:02/2026
ಸರ್ಕಾರಿ ಅಭಿಯೋಜಕರ ಕಚೇರಿ
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಳ್ಳೇಗಾಲ,ದಿನಾಂಕ:27/1/2026
ವಿಷಯ:- ಕೊಳ್ಳೇಗಾಲದ ಘನ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿ ಅಮಲ್‌ರಾಜ್ ಬಿನ್ ಥೋಮಸ್: ಕಲಂ: 103(1) 238 ಬಿ.ಎನ್.ಎಸ್. ಅಪರಾಧಕ್ಕೆ ಶಿಕ್ಷೆ ವಿಧಿಸಿರುವ ಬಗ್ಗೆ ದೈನಂದಿನ ಪತ್ರಿಕೆಗಳಲ್ಲಿ ವರದಿ ಪ್ರಕಟಿಸುವ ಬಗ್ಗೆ,

5:2:23/12/202450 ಸಂಜೆ 5ರ ಸಮಯದಲ್ಲಿ ಶೋಭರನ್ನು ಮದ್ಯಪಾನ ಮಾಡಲು,ಹಣವನ್ನು ಕೇಳಿದಕ್ಕೆ ಶೋಭ ಹಣ ಕೊಡದೆ ಇದ್ದ ವಿಚಾರದಲ್ಲಿ ಗಲಾಟೆ ಮಾಡಿ, ಶೋಭಳನ್ನು ತನ್ನ ಮನೆಯೊಳಗೆ ಎಳೆದುಕೊಂಡು ಹೋಗಿ, ಮನೆಯ ಬಾಗಿಲನ್ನು ಹಾಕಿಕೊಂಡು ಶೋಭರವರನ್ನು ಹೊಡೆದು ನೋವುಂಟು ಮಾಡಿದಾಗ ರಾತ್ರಿ 9 ಗಂಟೆ ಸಮಯದಲ್ಲಿ ಪೋಲಿಸ್ ಕಂಪ್ಲೇಟ್ ಕೊಡುತ್ತೇನೆಂದು ಶಿವುರವರ ಜಮಿನಿನ ಕಡೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಅಮಲ್‌ರಾಜ್ ಒಂದು ದೊಣ್ಣೆಯನ್ನು ತೆಗೆದುಕೊಂಡು ಶೋಭರವರನ್ನು ಕೊಲೆ ಮಾಡುವ ಉದ್ದೇಶದಿಂದ ದೊಣ್ಣೆಯಿಂದ ಹೊಡೆದು ಶೋಭರವರ ಎಡಮುಂಗೈ ಮುರಿದು ಅವಳ ಹಿಂದೆ ಓಡಿಹೋಗಿ ಕೆಳಕ್ಕೆ ಬೀಳಿಸಿ ಹೊಡೆದು ನೋವುಂಟು ಮಾಡಿ, ತನ್ನ ಕೈಗಳಿಂದ ಶೋಭರವರ ಕುತ್ತಿಗೆಯನ್ನು ಇಸುಕಿ ದೊಣ್ಣೆಯಿಂದ ಮನಬಂದಂತೆ ಹೊಡೆದು ಕೋಲ್ಲಲಾಗಿದೆ, ಸ್ಥಳದಲ್ಲಿಯೇ ಕೊಲೆ ಮಾಡಿ ಸಾಕ್ಷ್ಯ ನಾಶಮಾಡುವ ಸಲುವಾಗಿ ಹೊಡೆದ ದೊಣ್ಣೆಯನ್ನು ಮುಳ್ಳಿನ ಪೊದೆಯಲ್ಲಿ ಆಡಗಿಸಿಟ್ಟು ಕೊಲೆ ಮಾಡಿರುವುದು ದೃಡಪಟ್ಟ ಮೇರೆಗೆ ಈ ಬಗ್ಗೆ ದೋಷಾರೋಪಣ ಪತ್ರ ಸಲ್ಲಿಸಿರುತ್ತಾರೆ.

ಮಾನ್ಯ ನ್ಯಾಯಾಲಯಕ್ಕೆ 103(1) 238 ಬಿ.ಎನ್. ಎಸ್. ಮೊ.ನಂ.215/2024 ರಂತೆ ಪ್ರಕರಣ ದಾಖಲಿಸಿಕೊಂಡು ಘನ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕೊಳ್ಳೇಗಾಲ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ತನಿಖಾಧಿಕಾರಿ ಶ್ರೀ ಪಿ.ಎನ್. ಶೇಷಾದ್ರಿ ಪಿ.ಐ ರಾಮಾಪುರ ಪೋಲಿಸ್ ಠಾಣೆರವರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದ್ದು, ಅದರಂತೆ ವಿಚಾರಣೆ ನಡೆಸಿ, ಮಾನ್ಯ ನ್ಯಾಯಾಲಯವು ಈ ಪ್ರಕರಣದಲ್ಲಿ ಅಮಲ್‌ರಾಜ್ :27/1/2026 0 800: 103(1) 238, ಹತ್ತು ಸಾವಿರ ದಂಡ ಹಾಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ಮಾನ್ಯ ನ್ಯಾಯಾಧೀಶರಾದ ಶ್ರೀ. ಟಿ.ಸಿ ಶ್ರೀಕಾಂತ್ ರವರು ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಕೊಳ್ಳೇಗಾಲ ಇವರು ತೀರ್ಪು ನೀಡಿ ಶಿಕ್ಷೆ ವಿಧಿಸಿದ್ದು, ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀ. ಸಿ.ಬಿ ಗಿರೀಶ್ ರವರು ವಿಚಾರಣೆ ನಡೆಸಿ, ವಾದ ಮಂಡಿಸಿರುತ್ತಾರೆ.ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಸಲುವಾಗಿ ಈ ಮಾಹಿತಿಯನ್ನು ಉಚಿತವಾಗಿ ದೈನಂದಿನ ಪತ್ರಿಕೆಗಳಲ್ಲಿ ಸರ್ಕಾರದ ವತಿಯಿಂದ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟ‌ರ್ ಗೀರಿಶ್ ವಾದ ಮಂಡಿಸಿ ತಿಳಿಸಿರುತ್ತಾರೆ .‌

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago