ಹಣ್ಣು, ಜೇನು, ಅಣಬೆ ಪ್ರದರ್ಶನ & ಮಾರಾಟ ಮೇಳ: ಬೆಳೆಗಾರರು ಮಳಿಗೆ ಕಾಯ್ದಿರಿಸಲು ಸೂಚನೆ

ಹಣ್ಣು, ಜೇನು, ಅಣಬೆ ಪ್ರದರ್ಶನ & ಮಾರಾಟ ಮೇಳ: ಬೆಳೆಗಾರರು ಮಳಿಗೆ ಕಾಯ್ದಿರಿಸಲು ಸೂಚನೆ

ಜಾಹೀರಾತು
Fruit, honey, mushroom exhibition & sales fair: Growers advised to reserve stalls

ಕೊಪ್ಪಳ ಜನವರಿ 28 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಹಣ್ಣು, ಜೇನು ಮತ್ತು ಅಣಬೆ ಪ್ರದರ್ಶನ ಹಾಗೂ ಮಾರಾಟ ಮೇಳ   (Koppal Fruits, Honey & Mushroom Festival)     ವನ್ನು ಆಯೋಜಿಸಲಾಗುತ್ತಿದ್ದು, ಮಳಿಗೆ ಕಾಯ್ದಿರಿಸಲು ಜಿಲ್ಲೆಯ ಆಸಕ್ತ ಬೆಳೆಗಾರರು ತಮ್ಮ ಹೆಸರನ್ನು ನೋಂದಾಯಿಸುವAತೆ ಕೊಪ್ಪಳ ತೋಟಗಾರಿಕೆ ಜಂಟಿ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ.
       ಗ್ರಾಹಕರಿಗೆ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಕರಬೂಜ, ಅಂಜೂರ, ಪೇರಲ, ಜೇನು, ಅಣಬೆ ಹಾಗೂ ವಿವಿಧ ತೋಟಗಾರಿಕೆ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ “ಶಿವರಾತ್ರಿ” ಹಬ್ಬದ ಪ್ರಯುಕ್ತ ಕೊಪ್ಪಳದ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಆವರಣದಲ್ಲಿ ಫೆಬ್ರವರಿ 12 ರಿಂದ 16ರ ವರೆಗೆ 5 ದಿನಗಳ ಕಾಲ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ.
       ಈ ಮೇಳದಲ್ಲಿ ಭಾಗವಹಿಸುವ ಜಿಲ್ಲೆಯ ಆಸಕ್ತ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಅಂಜೂರು, ಪೇರಲ ಮತ್ತು ಕರಬೂಜ ಬೆಳೆಗಾರರು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಹತ್ತಿರ ಹೆಸರು ನೋದಾಯಿಸಬೇಕಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಸಂಬAಧಿಸಿದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕು. ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
       ಹೆಸರು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ (ಜಿಪಂ)ಯ ಕೇಂದ್ರ ಸ್ಥಾನಿಕ ಸಹಾಯಕರು ಮೊ.ಸಂ: 8095359179, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಕೊಪ್ಪಳ ಮೊ.ಸಂ: 9611888607, ಗಂಗಾವತಿ ಮೊ.ಸಂ: 9480257282, ಕುಷ್ಟಗಿ ಮೊ.ಸಂ: 9743518608 ಹಾಗೂ ಯಲಬುರ್ಗಾ ಮೊ.ಸಂ: 9945644338, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯ ಪ್ರಕಟಣೆ ತಿಳಿಸಿದೆ.