
ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ

ಕೊಪ್ಪಳ ಜಿಲ್ಲಾಡಳಿತದಿಂದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕರಪತ್ರ ಬಿಡುಗಡೆ
Koppal District Administration releases pamphlet on Sparsh Leprosy Awareness Campaign

ಕೊಪ್ಪಳ ಜನವರಿ 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಾರ್ಯಾಲಯ ಕೊಪ್ಪಳ, ಇವರ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಹುತಾತ್ಮರಾದ ಈ ದಿನದಂದು ಶ್ರದ್ದಾಪೂರ್ವಕವಾಗಿ ಸ್ಮರಿಸಿ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಅಧಿಕಾರಿಗಳು ಹೋಗಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜಾಗೃತಿ ಮೂಡಿಸಿ ಕುಷ್ಠರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಕೊಡುವ ಕೆಲಸ ಮಾಡಬೇಕು. ಈ ರೋಗದ ತಪ್ಪು ಕಲ್ಪನೆಗಳನ್ನು ಜನರಲ್ಲಿ ಹೋಗಲಾಡಿಸಿ “ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು” ಎಂಬ ಘೋಷವಾಕ್ಯವನ್ನು ಹೇಳಿ, “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-2026” ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ.ಲಿಂಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.



