
ಬೆಂಬಲ ಬೆಲೆಯಲ್ಲಿ ಕಡಲೇಕಾಳು ಖರೀದಿ ನೋಂದಣಿ ಕೇಂದ್ರಗಳ ಪ್ರಾರಂಭ

Registration centers for purchasing pulses at support prices to be opened

ಕೊಪ್ಪಳ ಜನವರಿ 31 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೇಕಾಳು ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿರುತ್ತದೆ.
ಸರ್ಕಾರದ ಆದೇಶ ಸಂಖ್ಯೆ: ಸಿಒ 336 ಎಂಆರ್‌ಇ 2025 ಬೆಂಗಳೂರು, ದಿನಾಂಕ:29/01/2026 ಸನ್ 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ. 5,875 ರಂತೆ ಎಫ್..ಎ.ಕ್ಯೂ. ಗುಣಮಟ್ಟದ ಕಡಲೇಕಾಳನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯನ್ನು ಜರುಗಿಸಿ, ಸಭೆಯಲ್ಲಿ ತೀರ್ಮಾನಿಸಿದಂತೆ ಎಕರೆಗೆ 4 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಟ್ 40 ಕ್ವಿಂಟಲ್‌ರಂತೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಕಡಲೇಕಾಳು ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿರುತ್ತದೆ.
*ಕಡಲೇಕಾಳು ಖರೀದಿ ನೋಂದಣಿ ಕೇಂದ್ರಗಳ ವಿವರ:* ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ, ಘಟ್ಟಿರೆಡ್ಡಿಹಾಳ ಹಾಗೂ ಬೆಟಗೇರಿ ಸೇರಿ 6 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕನಕಗಿರಿ ತಾಲ್ಲೂಕಿನ ನವಲಿ ಮತ್ತು ಕನಕಗಿರಿ, ಕುಕನೂರು ತಾಲ್ಲೂಕಿನ ಕುಕನೂರು, ಚಿಕ್ಕೆನಕೊಪ್ಪ, ಬನ್ನಿಕೊಪ್ಪ, ಮಂಗಳೂರು, ತಳಕಲ್ ಮತ್ತು ಮಂಡಲಗೇರಿ, ಯಲಬುರ್ಗಾ ತಾಲ್ಲೂಕಿನ ಯಲಬುರ್ಗಾ, ಮುಧೋಳ, ಗೆದಗೇರಿ ಮತ್ತು ತೊಂಡಿಹಾಳ ಹಾಗೂ ಕುಷ್ಟಗಿ ತಾಲ್ಲೂಕಿನ ಮೆಣೇದಾಳ(ತಾವರಗೇರೆ), ಹನುಮಸಾಗರ ಮತ್ತು ಕುಷ್ಟಗಿ, ಈ ಎಲ್ಲಾ ಕೇಂದ್ರಗಳ `ಪಿಎಸಿಎಸ್’ ಖರೀದಿ ನೋಂದಣಿ, ಖರೀದಿ ಕೇಂದ್ರ ಏಜನ್ಸಿಗಳಾಗಿರುತ್ತದೆ.
*ನೋಡಲ್ ಅಧಿಕಾರಿಗಳ ವಿವರ:* ಖರೀದ ಕೇಂದ್ರಗಳ ನೋಡಲ್ ಅಧಿಕಾರಿಗಳ ವಿವರ ಇಂತಿದೆ. ಕೊಪ್ಪಳ ತಾಲ್ಲೂಕಿನ ಎಲ್ಲಾ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಮೊ.ಸಂ: 9902224089, ಇವರು ನೋಡಲ್ ಅಧಿಕಾರಿಯಾಗಿದ್ದಾರೆ. ಕನಕಗಿರಿ ತಾಲ್ಲೂಕಿನ ಖರೀದಿ ಕೇಂದ್ರಗಳಿಗೆ ಕನಕಗಿರಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಾವಿತ್ರಿ ಪಾಟೀಲ ಮೊ.ಸಂ: 9341978290, ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಯಲಬುರ್ಗಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೇಂದ್ರ ಕಛೇರಿ ಕುಕನೂರಿನ ಕಾರ್ಯದರ್ಶಿ ಗುರುಸ್ವಾಮಿ ಗುಡಿ ಮೊ.ಸಂ: 9972054874 ಹಾಗೂ ಕುಷ್ಟಗಿ ತಾಲ್ಲೂಕಿನ ಖರೀದಿ ಕೇಂದ್ರಗಳಿಗೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುರೇಶ ಬಿ. ತಂಗನೂರು ಮೊ.ಸಂ: 9880886909, ಇವರು ನೋಡಲ್ ಅಧಿಕಾರಿಯಾಗಿದ್ದಾರೆ.
ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಕಡಲೇಕಾಳು ಉತ್ಪನ್ನವನ್ನು ಖರೀದಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಕಡಲೇಕಾಳನ್ನು ಮಾತ್ರ ಖರೀದಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳದ ಶಾಖಾ ವ್ಯವಸ್ಥಾಪಕರ ಮೊ.ಸಂ: 8105690611 ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


