Application period for admission to residential schools extended
ಕೊಪ್ಪಳ ಫೆಬ್ರವರಿ 04, (ಕರ್ನಾಟಕ ವಾರ್ತೆ): ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ:ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆಗಳಿಗೆ 2026-27ನೇ ಸಾಲಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಹಿಂದುಳಿದ, ಪ:ಜಾತಿ, ಪ:ಪಂಗಡ, ವಿಶೇಷ ವರ್ಗದ ಬಡ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಅವಧಿಯನ್ನು ಫೆ.7 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 01 ಮಾರ್ಚ್ 2026ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಪ್ರಸ್ತುತ ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿತ್ತು. ಮುಂದುವರೆದು ಪ್ರವೇಶಾತಿಗೆ ಆನ್‌ಲೈನ್ ಮುಖಾಂತರ ಹತ್ತಿರದ ವಸತಿ ಶಾಲೆ, ಕಾಲೇಜುಗಳ ಮೂಲಕ ಅರ್ಜಿ ಸಲ್ಲಿಸಲು ಫೆ. 7 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ http://kea.kar.nic.in ಹಾಗೂ http://kreis.kar.nic.in ವೆಬ್‌ಸೈಟ್ ಹಾಗೂ ಸಮೀಪದ ವಸತಿ ಶಾಲೆಗಳ ಪ್ರಾಂಶುಪಾಲರುಗಳನ್ನು ಸಂಪರ್ಕಿಸಬಹುದಾಗಿದೆ.