Notice to Cooperative Societies to submit information on appointment of auditorsಕೊಪ್ಪಳ ಫೆಬ್ರವರಿ 04, (ಕರ್ನಾಟಕ ವಾರ್ತೆ): ಸಹಕಾರಿ ಸಂಘಗಳು ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಂಡಿರುವ ಮಾಹಿತಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8) ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ (8) ಅನ್ವಯ ಲೆಕ್ಕಪರಿಶೋಧಕರ ನೇಮಕಾತಿ ಬಗ್ಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರ ಕಛೇರಿಗೆ ವಾರ್ಷಿಕ ಸಭೆ ಜರುಗಿಸಿದ 7 ದಿನಗಳೊಳಗಾಗಿ ಸಲ್ಲಿಸಬೇಕಾಗಿತ್ತು. ಆದರೆ, ಇನ್ನು ಬಹಳಷ್ಟು ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಗಳು ಇಲ್ಲಿಯವರೆಗೆ ಲೆಕ್ಕಪರಿಶೋಧಕರ ನೇಮಕಾತಿ ಬಗ್ಗೆ ಈ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಹಾಗಾಗಿ, 2025-26ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ತಕ್ಷಣ ವಿಳಂಬಕ್ಕೆ ಅವಕಾಶ ನೀಡದೇ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧ್ಯಕ್ಷರ ರುಜುವಿನೊಂದಿಗೆ ವಾರ್ಷಿಕ ಮಹಾಸಭೆಯ ನಡವಳಿಯೊಂದಿಗೆ ಮಾಹಿತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೊ.ಸಂ: 7259730379 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರ ಕಛೇರಿಯ ಪ್ರಕಟಣೆ ತಿಳಿಸಿದೆ.


