ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
Awareness program on children's rights and children's laws

ಕೊಪ್ಪಳ ಫೆಬ್ರವರಿ 05, (ಕರ್ನಾಟಕ ವಾರ್ತೆ): ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅಭಿನವ ಶ್ರೀ ಸಿದ್ದೇಶ್ವರ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳರವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳದ ಏಜ್ಯುಕೇರ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಗೆ ಸಂಬAಧಿಸಿದAತೆ ಕಾನೂನುಗಳು ಹಾಗೂ ಹದಿಹರೆಯದವರಲ್ಲಿ ಆಗುವ ದೈಹಿಕ, ಮಾನಸಿಕ ಬದಲಾವಣೆಗಳು, ವೈಯಕ್ತಿಕ ಶುಚಿತ್ವಕ್ಕೆ ಸಂಬAಧಿಸಿದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಮಕ್ಕಳ ಸಹಾಯವಾಣಿ ಸಂಖ್ಯೆಗಳಾದ 1098 ಮತ್ತು ಇಆರ್‌ಎಸ್‌ಎಸ್ 112 ಅಕ್ಕಪಡೆಗಳ ಬಳಕೆಯ ಬಗ್ಗೆ ಹಾಗೂ ಬಾಲ್ಯವಿವಾಹ ತಡೆ, ಪೋಕ್ಸೋ ಕಾಯ್ದೆ, ಮಕ್ಕಳ ಸುರಕ್ಷತಾ ನೀತಿ ಮತ್ತು ಸುರಕ್ಷಿತ ಸ್ಪರ್ಶ – ಅಸುರಕ್ಷಿತ ಸ್ಪರ್ಶ್, ಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕಳಸಾಪೂರ, ಪೊಲೀಸ್ ಇಲಾಖೆಯ ಪ್ರತಿನಿಧಿ ಜಿ. ಸಿ. ಕಲಾಲ, ಸಾಮಾಜಕಾರ್ಯಕರ್ತೆ ಪ್ರತಿಭಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಸಂಯೋಜಕರು, ಮಕ್ಕಳ ಸಹಾಯವಾಣಿ (1098/112) ಕೇಂದ್ರ. ಅಭಿನವ ಶ್ರೀ ಸಿದ್ದೇಶ್ವರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಹಳ್ಳಿಗುಡಿ, ಎಜ್ಯುಕೇರ್ ಶಿಕ್ಷಣ ಸಂಸ್ಥೆಯ ಉಪ ಪ್ರಾಂಶುಪಾಲರಾದ ಸುನಿತಾ, ದೈಹಿಕ ಶಿಕ್ಷಕ ಶ್ರೀಕಾಂತ್ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago