ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜನ ಜಾಗೃತಿ ಜಾಥಾ ಯಶಸ್ವಿ
Public awareness rally as part of World Cancer Day a success
ಕೊಪ್ಪಳ ಫೆಬ್ರವರಿ 05, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳ ಕಛೇರಿ, ಜಿಲ್ಲಾ ಎನ್.ಸಿ.ಡಿ ಕೋಶ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಬಸವಶ್ರೀ ಪ್ಯಾರಾಮೆಡಿಕಲ್ ಕಾಲೇಜ್, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫೆ.4 ರಂದು ಹಳೇ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ ಹೆಚ್., ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ, ಮೂಢನಂಬಿಕೆ ತೊಲಗಿಸಿ, ಜನರಲ್ಲಿ ಆರೋಗ್ಯ ಪೂರ್ಣ ಜೀವನಶೈಲಿ ಮತ್ತು ಉತ್ತಮ ಆಹಾರ ಪದ್ದತಿ ರೂಡಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಮೊದಲು 2011ರಲ್ಲಿ ಪ್ರಾರಂಭಿಸಲಾಯಿತು. ಕ್ಯಾನ್ಸರ್ ಖಾಯಿಲೆ ಹರಡುವ ರೀತಿ, ಲಕ್ಷಣಗಳು ಅದರ ಮುಂಜಾಗ್ರತಾ ಕ್ರಮಗಳ ಕುರಿತು, ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ. ಮುಖ್ಯವಾಗಿ ಈ ರೋಗವು ಅಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದ್ದು, ಸಾಮಾನ್ಯವಾಗಿ ಪುರುಷರಲ್ಲಿ ಬಾಯಿ ಕ್ಯಾನ್ಸರ್, ಶ್ವಾಸಕೋಶ ಕ್ಯಾನ್ಸರ್, ಅನ್ನನಾಳ ಕ್ಯಾನ್ಸರ್ ಹಾಗೂ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ. ವಾಸಿಯಾಗದ ಗಾಯ, ಅಸಹಜ ರಕ್ತಸ್ರಾವ, ಬಹಳ ದಿನಗಳ ಕೆಮ್ಮು, ನೋವಿಲ್ಲದ ಗಡ್ಡೆ, ಊತ ಇವು ಕ್ಯಾನ್ಸರ್ ರೋಗದ ಲಕ್ಷಣಗಳಾಗಿದ್ದು, ಇವುಗಳ ಬಗ್ಗೆ ನಿರ್ಲಕ್ಷö್ಯ ಮಾಡದೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಹತ್ತಿರ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಮುಂಜಾಗೃತಾ ಕ್ರಮವಾಗಿ ಆರೋಗ್ಯಕರ ಜೀವನ ಶೈಲಿ ನಡೆಸಬೇಕು. ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಸೇವನೆ, ಹಾಲು ಮತ್ತು ಹಾಲಿನ ಉತ್ಪನ್ನಗಳ ಹೆಚ್ಚು ಬಳಕೆ ಮಾಡುವುದು, ಕ್ಯಾನ್ಸರ್ ಪ್ರತಿರೋಧಕ ಶಕ್ತಿಯಿರುವ ಆಹಾರ ಪದಾರ್ಥಗಳ ಬಳಕೆ, ಆಹಾರದಲ್ಲಿ ಹೆಚ್ಚಿನ ರೀತಿಯ ತರಕಾರಿ/ಹಣ್ಣು ಹಂಪಲುಗಳ ಬಳಕೆ ಮಾಡುವ ಬಗ್ಗೆ ಹಾಗೂ ಬಣ್ಣಗಳಿಂದ ಕೂಡಿದ ಆಹಾರ ಪದಾರ್ಥಗಳ ಬಳಕೆ (ಉದಾ: ಬೇಕರಿ ಪದಾರ್ಥ, ಗೋಬಿ, ಮುಂತಾದವು..) ಮಾಡದಂತೆ ಎಲ್ಲಾ ವಿದ್ಯಾರ್ಥಿಗಳು ಮತ್ತು ಕ್ಷೇತ್ರ ಸಿಬ್ಬಂದಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ಕೊಳಚೆ ಪ್ರದೇಶಗಳಲ್ಲಿ ಕ್ಯಾನ್ಸರ್ ಖಾಯಿಲೆಯ ನಿಯಂತ್ರಣ ಕುರಿತು, ಅರಿವು ಮೂಡಿಸಿ, ಮುಂಜಾಗೃತೆ ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಮಾತನಾಡಿ, ಜೀವನಶೈಲಿಯಿಂದ ಬರುವ ಅಸಾಂಕ್ರಾಮಿಕ ರೋಗಗಳಲ್ಲಿ ಕ್ಯಾನ್ಸರ್ ಖಾಯಿಲೆ ಒಂದಾಗಿದ್ದು, “ವಿಶಿಷ್ಠತೆಯಿಂದ ಏಕತೆ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಕ್ಯಾನ್ಸರ್ ಖಾಯಿಲೆ ನಿಯಂತ್ರಣ ಕುರಿತು, ಜಾಗೃತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಮುಂದಿನ ದಿನಗಳಲ್ಲಿ 9-14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಯಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ನೀಡಲಾಗುತ್ತದೆ. ನಾವು ಸೇವಿಸುವ ಆಹಾರ ಪದಾರ್ಥಗಳ ಮೂಲಕ ಮತ್ತು ಪ್ಲಾಸ್ಟಿಕ್ ನೀರಿನ ಬಾಟಲಿಗಳ ಮೂಲಕ ಕ್ಯಾನ್ಸರ್ ಹರಡುವ ಸಾಧ್ಯತೆ ಇರುತ್ತದೆ ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಯುವಕರು ತಂಬಾಕು ಸೇವನೆ, ಮದ್ಯಪಾನ ಸೇವನೆಗಳಿಂದ ದೂರವಿದ್ದು, ಕ್ಯಾನ್ಸರ್ ಖಾಯಿಲೆ ಹರಡುವ ಬಗ್ಗೆ ಮತ್ತು ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣ ಮಾಡಲು ಸಹಕರಿಸುವಂತೆ ತಿಳಿಸಿದರು. ನಂತರ ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಪ್ರಾರಂಭವಾಗಿ ಕೇಂದ್ರ ಬಸ್ ನಿಲ್ದಾಣ, ಡಾ.ಸಿಂಪಿಲಿAಗಣ್ಣ ರಸ್ತೆ, ನಗರ ಪೋಲಿಸ್ ಠಾಣೆ, ದಿವಟರ್ ಸರ್ಕಲ್, ಅಶೋಕ್ ವೃತ್ತ ಮಾರ್ಗವಾಗಿ ನಡೆದ ಜನ ಜಾಗೃತಿ ಜಾಥಾದಲ್ಲಿ ಕ್ಯಾನ್ಸರ್ ಖಾಯಿಲೆ ನಿಯಂತ್ರಣ ಕುರಿತು, ವಿದ್ಯಾರ್ಥಿಗಳು ನಾಮಫಲಕಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಾ, ಸಾರ್ವಜನಿಕರಿಗೆ ಅರಿವು ಮೂಡಿಸಿ, ಪುನಃ ಹಳೇ ಜಿಲ್ಲಾ ಆಸ್ಪತ್ರೆ ಆವರಣಕ್ಕೆ ಆಗಮಿಸಿ, ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ಕಾರ್ಯಕ್ರಮದ ಫಿಜಿಷಿಯನ್ ಡಾ. ಶರಣಪ್ಪ, ಎನ್.ಸಿ.ಡಿ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಡಾ. ಜಯಶ್ರೀ ಎಮ್.ಹೆಚ್., ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ಮಹೇಶ ಉಮಚಗಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಲ್.ವ್ಹಿ. ಸಜ್ಜನರ್, ಬಸವಶ್ರೀ ಪ್ಯಾರಾಮೆಡಿಕಲ್ ಕಾಲೇಜಿನ ಬೋಧಕರು ಮತ್ತು ವಿದ್ಯಾರ್ಥಿಗಳು, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪದಾಧಿಕಾರಿಗಳು ಹಾಗೂ ವಿವಿಧ ವೃಂದದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.