ನಿರ್ಮಾಪಕ ಕನಕಪುರ ಶ್ರೀನಿವಾಸ್‌ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆಗ್ರಹ.

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆಗ್ರಹ.

District president Khader Bhasha demands legal action against producer Kanakapura Srinivas.

ಗಂಗಾವತಿ,ಫೆ.07:ಕನ್ನಡದ ಖ್ಯಾತ ನಿರ್ಮಾಪಕರಾದ ಕನಕಪುರ ಶ್ರೀನಿವಾಸ್ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸಂಘದ ಸದಸ್ಯರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ‘ಕಾಟನ್ ಪೇಟೆಗೇಟ್’ ಎಂಬ ಕನ್ನಡ ಸಿನಿಮಾದ ಪತ್ರಿಕಾಗೋಷ್ಠಿಯ ವೇದಿಕೆಯಲ್ಲಿ ಮಾತನಾಡಿದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು, ಕರ್ನಾಟಕ ರತ್ನ ದಿವಂಗತ ಡಾ. ಪುನೀತ್ ರಾಜ್‌ಕುಮಾ‌ರ್ ಅವರ ಕುರಿತು ಹಾಗೂ ಕನ್ನಡದ ಕಲಾವಿದರು ಮತ್ತು ನಿರ್ದೇಶಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪುನೀತ್ ರಾಜ್‌ಕುಮಾರ್ ನಾಯಕತ್ವದಲ್ಲಿ ತಮ್ಮ

ನಿರ್ಮಾಣದ ‘ಮಯೂರ’ ಸಿನಿಮಾ ಸೆಟ್ಟೇರಲು ಮುನ್ನ ನಿರ್ದೇಶಕರ ನಿಧನದಿಂದಾಗಿ ಸಿನಿಮಾ ಸ್ಥಗಿತಗೊಂಡಿತ್ತು.

ಈ ಹಿನ್ನೆಲೆಯಲ್ಲಿಯೇ “ಈಗ ಪುನೀತ್ ರಾಜ್‌ಕುಮಾರ್ ಸತ್ತು ಹೋಗಿದ್ದಾರೆ, ಇಬ್ಬರು ಮೇಲೆ ಚೆನ್ನಾಗಿದ್ದಾರೆ” ಎಂಬ ಅಸಂಬದ್ಧ ಹಾಗೂ ವಿಕೃತ ಮನೋಭಾವದ ಹೇಳಿಕೆಯನ್ನು ನೀಡಿ ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ಆಘಾತ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ರೀತಿಯ ಹೇಳಿಕೆಗಳು ಸಾರ್ವಜನಿಕ ಶಾಂತಿ ಕದಡುವುದಲ್ಲದೆ, ದಿವಂಗತ ಮಹಾನ್ ಕಲಾವಿದರ ಗೌರವಕ್ಕೆ ಧಕ್ಕೆ ತರುವಂತಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಕನ್ನಡಾಭಿಮಾನಿಗಳು ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಎನ್.ಆರ್. ರಮೇಶ್ ಅವರ ಆದೇಶದ ಮೇರೆಗೆ ಗಂಗಾವತಿ ಪೊಲೀಸ್ ಉಪವಿಭಾಗದ ಮಾನ್ಯ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಗಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಾll.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್ ಸೇರಿದಂತೆ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ
ಡಾll.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ, ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್, ಮತ್ತು ಸಂಘದ ಸದಸ್ಯರಾದ ಮಂಜುನಾಥ್ ಸಾಬಳೆ, ಈ ಸಂದರ್ಭದಲ್ಲಿ ಉಪಸಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago